ADVERTISEMENT

ಮೈಸೂರು: ಇವಿಎಂ ಕೊಠಡಿಗೆ 3 ಹಂತದ ಭದ್ರತೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2024, 14:08 IST
Last Updated 27 ಏಪ್ರಿಲ್ 2024, 14:08 IST
ಮೈಸೂರಿನ ಪಡುವಾರಹಳ್ಳಿಯ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಇವಿಎಂಗಳನ್ನು ಸಂಗ್ರಹಿಸಿರುವುದನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಶನಿವಾರ ಪರಿಶೀಲಿಸಿದರು
ಮೈಸೂರಿನ ಪಡುವಾರಹಳ್ಳಿಯ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಇವಿಎಂಗಳನ್ನು ಸಂಗ್ರಹಿಸಿರುವುದನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಶನಿವಾರ ಪರಿಶೀಲಿಸಿದರು   

ಮೈಸೂರು: ಮೈಸೂರು– ಕೊಡುಗು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ಶಾಂತಿಯುತವಾಗಿ ಮುಗಿದಿದ್ದು, ಮೊಹರಾದ ಇವಿಎಂ, ವಿವಿ ಪ್ಯಾಟ್ ಹಾಗೂ ಸಂಬಂಧಿಸಿದ ಕಾಗದಪತ್ರಗಳನ್ನು ಇಲ್ಲಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿನಲ್ಲಿ ಸಂಗ್ರಹಿಸಲಾಗಿದೆ.‌

ಚುನಾವಣಾ ಸಿಬ್ಬಂದಿ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಮತಯಂತ್ರಗಳನ್ನು ಸಂಗ್ರಹಿಸಿರುವ ಭದ್ರತಾ ಕೊಠಡಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಮತಯಂತ್ರಗಳನ್ನು ಇಟ್ಟಿರುವ ಭದ್ರತಾ ಕೊಠಡಿಗೆ ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಮೊದಲ ಹಂತದಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ತುಕಡಿ, 2ನೇ ಹಂತದಲ್ಲಿ ಕರ್ನಾಟಕ ಸಶಸ್ತ್ರ ಮೀಸಲು ಪಡೆ ಹಾಗೂ 3ನೇ ಹಂತದಲ್ಲಿ ಸ್ಥಳೀಯ ಸಿವಿಲ್ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಿಗಾ ವಹಿಸಲಾಗಿದೆ’ ಎಂದು ರಾಜೇಂದ್ರ ತಿಳಿಸಿದರು.

ADVERTISEMENT

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ. ಮುತ್ತುರಾಜ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮಹೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.