ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಟಿಐ ಪತ್ರಕರ್ತೆಯ ಮೇಲೆ ಹಲ್ಲೆ: NCW ಸದಸ್ಯೆ ಖುಷ್ಬೂ ಸುಂದರ್ ಖಂಡನೆ

Published 28 ಮಾರ್ಚ್ 2024, 13:15 IST
Last Updated 28 ಮಾರ್ಚ್ 2024, 13:15 IST
ಅಕ್ಷರ ಗಾತ್ರ

ನವದೆಹಲಿ: ಪಿಟಿಐ ಸುದ್ದಿ ಸಂಸ್ಥೆಯ ಪತ್ರಕರ್ತೆಯ ಮೇಲೆ ಎಎನ್‌ಐ ಸುದ್ದಿ ಸಂಸ್ಥೆಯ ಪತ್ರಕರ್ತ ಹಲ್ಲೆ ನಡೆಸಿರುವುದಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಸದಸ್ಯೆ ಖುಷ್ಬೂ ಸುಂದರ್ ಆಘಾತ ವ್ಯಕ್ತಪಡಿಸಿದ್ದು, ಆತನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಇದ್ದ ಪತ್ರಿಕಾಗೋಷ್ಠಿಯಲ್ಲಿ ಎಎನ್‌ಐ ವರದಿಗಾರ, ಪಿಟಿಐ ಮಹಿಳಾ ವರದಿಗಾರ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪಿಟಿಐ ಆರೋಪಿಸಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಖುಷ್ಬೂ ಸುಂದರ್, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. 'ಬೆಂಗಳೂರಿನಲ್ಲಿ ಪಿಟಿಐ ಮಹಿಳಾ ಪತ್ರಕರ್ತೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪತ್ರಕರ್ತನ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಆತನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು' ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ‌‌ಹರಿದಾಡುತ್ತಿದೆ. ವಿಡಿಯೊವನ್ನು ಪೋಸ್ಟ್‌ ಮಾಡಿರುವ ಪಿಟಿಐ ಸುದ್ದಿ ಸಂಸ್ಥೆ, ಎಎನ್‌ಐ ಪತ್ರಕರ್ತನ ನಡವಳಿಕೆಯನ್ನು ಖಂಡಿಸಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮಕೈಗೊಳ್ಳುವುದಾಗಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT