ಶುಕ್ರವಾರ, ನವೆಂಬರ್ 20, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ನಿಜವಾದ ಒಳ್ಳೆಯತನಕ್ಕೆ ತನ್ನದು ಒಳ್ಳೆಯ ಗುಣ ಎಂಬುದು ತಿಳಿದಿರುವುದಿಲ್ಲ.
--ಸಾಫೊಕ್ಲಿಸ್
ಪುರವಣಿ
ಭೂಮಿಕಾ
ಆರೋಗ್ಯ
ಮೆಟ್ರೊ ಶನಿವಾರ
ಮೆಟ್ರೊ ಮಂಗಳವಾರ
ವಿಮರ್ಶೆ
ಪುಸ್ತಕ ವಿಮರ್ಶೆ
ಚಿತ್ರ ವಿಮರ್ಶೆ
ಸಾಪ್ತಾಹಿಕ ಪುರವಣಿ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಸಿನಿಮಾ- ಕಿರುತೆರೆ ರಂಜನೆ
ವಾಣಿಜ್ಯ ಪುರವಣಿ
ಕರ್ನಾಟಕ ದರ್ಶನ
ಯುವಜನ
ಕೃಷಿ
ಮೆಟ್ರೊ ಗುರುವಾರ
ತಂತ್ರಜ್ಞಾನ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ರಾಜ್ಯ
‘ಕೋಮು ಶಕ್ತಿ ನಿಯಂತ್ರಿಸಿದರೆ ಇಂದಿರಾ ಜನ್ಮದಿನ ಅರ್ಥಪೂರ್ಣ
‘ಕೋಮುವಾದಿ ಶಕ್ತಿಗಳು ಅಧಿಕಾರದಲ್ಲಿರುವ ಕಾರಣ ರಾಜ್ಯದಲ್ಲಿ ಚರ್ಚ್ ಮತ್ತು ಮಸೀದಿಗಳ ಮೇಲೆ ದಾಳಿ ನಡೆಯುತ್ತಿದೆ. ಅಲ್ಪಸಂಖ್ಯಾತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ’


ಬೆಂಗಳೂರು: ‘ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ಕೆಳಗಿಳಿಸಿದಾಗ ಮಾತ್ರ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದಂತಾಗುವುದು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 92ನೇ ಜನ್ಮದಿನದ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಕೋಮುವಾದಿ ಶಕ್ತಿಗಳು ಅಧಿಕಾರದಲ್ಲಿರುವ ಕಾರಣ ರಾಜ್ಯದಲ್ಲಿ ಚರ್ಚ್ ಮತ್ತು ಮಸೀದಿಗಳ ಮೇಲೆ ದಾಳಿ ನಡೆಯುತ್ತಿದೆ. ಅಲ್ಪಸಂಖ್ಯಾತರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ’ ಎಂದರು.

‘ಇಂದಿರಾ ಗಾಂಧಿಯವರ ನಾಯಕತ್ವ ಇದ್ದಿದ್ದರೆ ಕೋಮುವಾದಿ ಶಕ್ತಿಗಳಿಗೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. ಮೇಲುಗೈ ಸಾಧಿಸಲು ಸಹ ಆಗುತ್ತಿರಲಿಲ್ಲ’ ಎಂದು ಅವರು ಹೇಳಿದರು.

‘ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್‌ಗೆ ಮಾತ್ರವೇ ಸಾಮರ್ಥ್ಯವಿದ್ದು, ಈ ನಿಟ್ಟಿನಲ್ಲಿ ನಿರಂತರ ಹೋರಾಟ ರೂಪಿಸಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕಿದೆ’ ಎಂದು ತಿಳಿಸಿದರು.

‘ನೆರೆ ಪರಿಹಾರ ಕಾರ್ಯದಲ್ಲಿ ಅಕ್ರಮ ನಡೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಹೇಳಿದ್ದು, ಈ ಸಂಬಂಧ ಸಮರ್ಪಕ ರೀತಿಯಲ್ಲಿ ತನಿಖೆ ನಡೆಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

‘ಹಿರಿಯ ನಾಯಕರ ಜನ್ಮದಿನವನ್ನು ಆಚರಿಸಿದರೆ ಸಾಲದು, ಅವರ ವಿಚಾರ ಮತ್ತು ತತ್ವಗಳನ್ನು ಪಾಲಿಸಬೇಕು’ ಎಂದು ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ಹೇಳಿದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ವಿ.ಎಸ್.ಉಗ್ರಪ್ಪ, ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್, ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ  ಉಪಸ್ಥಿತರಿದ್ದರು.


ಮುಖ್ಯಮಂತ್ರಿ ಗಣಿಧಣಿಗಳ ಕೈಗೊಂಬೆ
‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗಣಿಧಣಿಗಳ ಕೈಗೊಂಬೆಯಾಗಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಆರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಬಿಜೆಪಿಯೊಂದೇ ಆಡಳಿತ ನಡೆಸುತ್ತಿರುವಾಗ, ಸಮನ್ವಯ ಸಮಿತಿ ರಚಿಸುವುದು ಅಗತ್ಯವಿರಲಿಲ್ಲ. ಯಾವ ಕಾರಣಕ್ಕಾಗಿ ಸಮನ್ವಯ ಸಮಿತಿ ರಚಿಸಲಾಗಿದೆ?’ ಎಂದು ಪ್ರಶ್ನಿಸಿದರು. ‘ದುರ್ಬಲ ಮುಖ್ಯಮಂತ್ರಿ ಹೊಂದಿರುವ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ’ ಎಂದು ಅವರು ಹೇಳಿದರು.

ವಿಧಾನ ಪರಿಷತ್‌ಚುನಾವಣೆ: ಶೀಘ್ರ ಅಭ್ಯರ್ಥಿಗಳ ಪಟ್ಟಿ
‘ವಿಧಾನ ಪರಿಷತ್ತಿನ ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು’ ಎಂದು ಆರ್.ವಿ.ದೇಶಪಾಂಡೆ ಹೇಳಿದರು.

‘ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸಲಾಗುವುದು. ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು’ ಎಂದು ತಿಳಿಸಿದರು.

ಇತರ ಸುದ್ದಿಗಳು
ಬಂಧಿತ ನಕ್ಸಲರು ಅಜ್ಞಾತ ಸ್ಥಳದಲ್ಲಿ
ಶಂಕಿತ ನಕ್ಸಲ್ ಬಂಧನ
ಚಂಡಮಾರುತದಿಂದ ನಾಪತ್ತೆಯಾದ ಮೀನುಗಾರ
ರೈತರ ಅಧ್ಯಯನ ಪೀಠ ಸ್ಥಾಪನೆಗೆ ಸಲಹೆ
ಉಸ್ತುವಾರಿ ಸಚಿವರಿಗೆ ಸೂಚನೆ- ಸಿಎಂ
ಹಂಪಿಯಲ್ಲಿ ಶೀಘ್ರವೇ ‘ಥೀಂ ಪಾರ್ಕ್’
ವೆುಜೆಸ್ಟಿಕ್ ಬಸ್ ನಿಲ್ದಾಣ ಸ್ಥಳಾಂತರ
ಮುತ್ಸದ್ಧಿ ರಾಜಕಾರಣಿ ಶಂಕರಾನಂದ ಅಸ್ತಂಗತ
ಅಂಗವಿಕಲ ಮಕ್ಕಳ ಮನೆ ಬಾಗಿಲಿಗೆ ಶಿಕ್ಷಣ
ವೈದ್ಯರ ಕಾಯಂಗೆ ಆದೇಶ:ಆಗ್ರಹ
ಭಿನ್ನಮತಕ್ಕೆ ವಿರಾಮ: ಚುನಾವಣೆಯತ್ತ ಚಿತ್ತ
‘ಕೋಮು ಶಕ್ತಿ ನಿಯಂತ್ರಿಸಿದರೆ ಇಂದಿರಾ ಜನ್ಮದಿನ ಅರ್ಥಪೂರ್ಣ
ರ್‍ಯಾಂಬುಲೆಟ್ ಕುರಿಗಳದೇ ಆಕರ್ಷಣೆ
ನಗರ- ಗ್ರಾಮ ಅಂತರ ಕಡಿಮೆಗೆ ಯತ್ನ: ಶೆಟ್ಟರ್
ಕನ್ನಡದಲ್ಲಿ ರೈಲ್ವೆ
ಬೈಂದೂರು: ರಸ್ತೆ ಅಪಘಾತ-9 ಸಾವು
ಸರ್ಕಾರದ ವೈಫಲ್ಯ ರಾಜ್ಯಪಾಲರ ತರಾಟೆ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618