ಯಲಹಂಕ: ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿಮೇಳಕ್ಕೆ ಕುಲಪತಿ ಡಾ.ಪಿ.ಜಿ.ಚಂಗಪ್ಪ ತಮ್ಮನ್ನು ಆಹ್ವಾನಿಸಿಲ್ಲ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕೃಷಿಮೇಳ ನಡೆಯುತ್ತಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ್ದ ಅವರು, ವಿವಿಧ ಮಳಿಗೆಗಳನ್ನು ವೀಕ್ಷಿಸಿದ ನಂತರ ವರದಿಗಾರರೊಂದಿಗೆ ಮಾತನಾಡಿ, ನಮ್ಮ ಕ್ಷೇತ್ರದಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ರೈತರು ಸಮಾರಂಭಕ್ಕೆ ಆಗಮಿಸಿದ್ದಾರೆ. ತಮ್ಮನ್ನೂ ಆಹ್ವಾನಿಸಿದ್ದರೆ ಸಂತೋಷವಾಗುತ್ತಿತ್ತು ಎಂದರು.
ಕುಲಪತಿಗಳು ಈ ಕ್ರಮವನ್ನು ಖಂಡಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಜಿ.ಪಂ.ಸದಸ್ಯೆ ವಾಣಿಶ್ರೀ ವಿಶ್ವನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.