ಪಣಜಿ (ಪಿಟಿಐ): ಗೋವಾ ಪ್ರವೇಶ ನಿರ್ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಅನೂರ್ಜಿತಗೊಳಿಸುವಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಾಂಬೆ ಹೈಕೋರ್ಟ್‌ನ ಗೋವಾ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಂದಿನ ವಾರ ಅರ್ಜಿಯ ವಿಚಾರಣೆಯನ್ನು ಪೀಠ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.