ADVERTISEMENT

ಬೀದರ್‌ | ಹೆಂಡತಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2024, 16:31 IST
Last Updated 25 ಏಪ್ರಿಲ್ 2024, 16:31 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೀದರ್‌: ಹೆಂಡತಿ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಮಹಾರಾಷ್ಟ್ರದ ಸೋನಾಳವಾಡಿಯ ರಮೇಶ ಆನಂದರಾವ್‌ ಅವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಯಕುಮಾರ ಎಂ. ಆನಂದಶೆಟ್ಟಿ ಅವರು ಕಠಿಣ ಕಾರಾಗೃಹ ವಾಸದ ಜೀವಾವಧಿ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕ ನಾಗಪ್ಪ ಸಿ. ನಾಕಮನ್ ವಾದ ಮಂಡಿಸಿದರು.

ADVERTISEMENT

ಮಹಾರಾಷ್ಟ್ರದ ಕೋತಳಿ ಗ್ರಾಮದ ಶ್ರೀಹರಿ ಜಂಪಾವಾಡ ಅವರ ಮಗಳಾದ ಸುನೀತಾ ಅಲಿಯಾಸ್‌ ಚಿತ್ರಕಲಾ ಇವರಿಗೆ ಸೋನಾಳವಾಡಿ ಗ್ರಾಮದ ರಮೇಶ ಆನಂದರಾವ ಅವರೊಂದಿಗೆ ಒಂಬತ್ತು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಇಬ್ಬರು ಮಕ್ಕಳಾಗಿದ್ದರು. ರಮೇಶ, ತನ್ನ ಹೆಂಡತಿಗೆ ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದ. 2018ರ ಡಿಸೆಂಬರ್‌ 28ರಂದು ಹೆಂಡತಿಯೊಂದಿಗೆ ಜಗಳವಾಡಿ ಹೊಡೆದು, ಕುತ್ತಿಗೆ ಹಿಚುಕಿ ಕೊಲೆ ಮಾಡಿದ್ದಾನೆ ಎಂದು ಕಮಲನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್‌ ಅಧಿಕಾರಿ ದಿಲೀಪ್‌ಕುಮಾರ ಬಿ. ಸಾಗರ ಅವರು ತನಿಖೆ ನಡೆಸಿ, ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.