ADVERTISEMENT

ನೇಹಾ ಹತ್ಯೆ: ಲವ್ ಜಿಹಾದ್‌ನ ಕೊನೆಯ ಪ್ರಕರಣವಾಗಲಿ- ಚಕ್ರವರ್ತಿ ಸೂಲಿಬೆಲೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2024, 14:09 IST
Last Updated 20 ಏಪ್ರಿಲ್ 2024, 14:09 IST
<div class="paragraphs"><p>ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಅವರು ನೇಹಾ ಪೋಷಕರಿಗೆ ಸಾಂತ್ವನ ಹೇಳಿದರು.</p></div>

ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಚಕ್ರವರ್ತಿ ಸೂಲಿಬೆಲೆ ಅವರು ನೇಹಾ ಪೋಷಕರಿಗೆ ಸಾಂತ್ವನ ಹೇಳಿದರು.

   

ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣದಲ್ಲೇ‌ ನೇಹಾ ಹತ್ಯೆ ಅತ್ಯಂತ ಗಂಭೀರ ಪ್ರಕರಣ. ಇಂತಹ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಲವ್ ಜಿಹಾದ್ ಪ್ರಕರಣದಲ್ಲಿ ನೇಹಾ ಹತ್ಯೆಯೇ ಕೊನೆಯಾಗಬೇಕು ಎಂದು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ನಗರದ ಬಿಡನಾಳದಲ್ಲಿರುವ ಮೃತ ನೇಹಾ ಹಿರೇಮಠ ಅವರ ಮನೆಗೆ ಶನಿವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ADVERTISEMENT

ಕೇಂದ್ರ ಸರ್ಕಾರ ಬೇಟಿ ಬಚಾವೊ, ಬೇಟಿ ಪಡಾವೋ ಎನ್ನುತ್ತಿದ್ದರೆ ರಾಜ್ಯದಲ್ಲಿ ಹೆಣ್ಣುಮಕ್ಕಳು ಹೆಣವಾಗುತ್ತಿದ್ದಾರೆ.‌ ಉತ್ತರ ಪ್ರದೇಶದಲ್ಲಿ ಹೆಣ್ಣುಮಕ್ಕಳನ್ನು ಚುಡಾಯಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಕಾನೂನಿದೆ. ನೇಹಾ ಹೆಸರಲ್ಲೂ ಕಾನೂನು ರೂಪಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಅಗತ್ಯವಿದ್ದರೆ ಎನ್‌ಕೌಂಟರ್ ಮಾಡಲಿ ಎಂದು‌ ಆಗ್ರಹಿಸಿದರು.

ಈ ಘಟನೆಯಿಂದ ಪೋಷಕರಿಗೆ ಆತಂಕ ಶುರುವಾಗಿದೆ. ಸರ್ಕಾರದ ಬೇಜವಾಬ್ದಾರಿ ಹೇಳಿಕೆಯೇ ಇದಕ್ಕೆ ಪ್ರೇರಣೆಯಾಗುತ್ತಿದೆ. ಇದು ತಾರ್ಕಿಕ ಅಂತ್ಯ ಕಾಣಬೇಕು. ಲವ್ ಜಿಹಾದ್ ಹಿಂದಿನ ಷಡ್ಯಂತ್ರವನ್ನು ಹೆಣ್ಣುಮಕ್ಕಳಿಗೆ ತಿಳಿಸಬೇಕಿದೆ ಎಂದರು.

ಇದು ಲವ್ ಜಿಹಾದ್ ಪ್ರಕರಣ ಎಂದು ರಾಜ್ಯ ಸರ್ಕಾರ ಒಪ್ಪಿಕೊಳ್ಳಬೇಕು. ಸಿಎಂ ನಿರ್ಲಕ್ಷ್ಯದ ಹೇಳಿಕೆಗೆ ಪ್ರತಿಯಾಗಿ ಹೇಳಿಕೆ ನೀಡಿದಾಗ ಸಹಜವಾಗಿ ಅದು ರಾಜಕೀಯ ರೂಪ ಪಡೆಯುತ್ತದೆ. ಇದು ಮನೆ ಮನೆಯ ಹೆಣ್ಣುಮಕ್ಕಳ ವಿಚಾರ. ನ್ಯಾಯ ಸಿಗುವವರೆಗೆ ವ್ಯಾಪಕ ಹೋರಾಟ ಮಾಡಲಾಗುತ್ತದೆ ಎಂದರು.

ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ನೇಹಾ ಪೋಷಕರಿಗೆ ಸಾಂತ್ವನ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.