ADVERTISEMENT

ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 9:21 IST
Last Updated 24 ಏಪ್ರಿಲ್ 2024, 9:21 IST
<div class="paragraphs"><p>ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು </p></div>

ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು

   

ಧಾರವಾಡ: ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಧಾರವಾಡದ ಕಾರಾಗೃಹದಿಂದ ಸಿಐಡಿ ಪೊಲೀಸರು ಹುಬ್ಬಳ್ಳಿಗೆ ಬುಧವಾರ ಕರೆದೊಯ್ದರು.

ನೇಹಾ ಕೊಲೆ ಪ್ರಕರಣಕ್ಕೆ ಇಡೀ ರಾಜ್ಯವೇ ಆಘಾತ ವ್ಯಕ್ತಪಡಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ಜತೆಗೆ ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ತ್ವರಿತಗತಿಯ ನ್ಯಾಯಾಲಯ ತೆರೆಯುವ ಭರವಸೆಯನ್ನೂ ಮುಖ್ಯಮಂತ್ರಿ ನೀಡಿದ್ದರು.

ADVERTISEMENT

ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಸಿಐಡಿ ಅರ್ಜಿ ಸಲ್ಲಿಸಿತ್ತು. ಅರ್ಜಿ‌ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಯನ್ನು 6 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದೆ.

ಇದರ ಬೆನ್ನಲ್ಲೇ ಧಾರವಾಡ ಕಾರಾಗೃಹದಲ್ಲಿರುವ ಫಯಾಜ್‌ನನ್ನು ಸಿಐಡಿ ಎಸ್‌ಪಿ ವೆಂಕಟೇಶ್ ನೇತೃತ್ವದ ತಂಡ ಬುಧವಾರ ಘಟನಾ ಸ್ಥಳವಾದ ಹುಬ್ಬಳ್ಳಿಗೆ ಕರೆದೊಯ್ದಿದೆ. ಈ ವೇಳೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.