ADVERTISEMENT

ಸಹಜ ಸ್ಥಿತಿಯತ್ತ ಶಿವಮೊಗ್ಗ: ಎಂದಿನಂತೆ ವಹಿವಾಟು ಆರಂಭ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2022, 6:14 IST
Last Updated 22 ಫೆಬ್ರುವರಿ 2022, 6:14 IST
ಶಿವಮೊಗ್ಗ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ.
ಶಿವಮೊಗ್ಗ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ.   

ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಮರಳಿದೆ.

ಸೋಮವಾರ ಸಂಜೆ ನಡೆದ ಅಂತ್ಯಸಂಸ್ಕಾರದ ನಂತರ ಎಲ್ಲೂ ಗಲಾಟೆಗಳು ನಡೆದಿಲ್ಲ. ಎಡಿಜಿಪಿ ಎಸ್ ಮುರುಗನ್, ಪೂರ್ವವಲಯ ಐಜಿಪಿ ತ್ಯಾಗರಾಜನ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಪರಿಸ್ಥಿತಿ ಅವಲೋಕಿಸಿದರು.

ಬಂದೋಬಸ್ತ್ ಕಾರ್ಯಕ್ಕೆ 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಹರ್ಷ ಕುಟುಂಬ ವಾಸವಿರುವ ಸೀಗೆಹಟ್ಟಿ ಸುತ್ತಲ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆ ನಿಯೋಜಿಸಲಾಗಿದೆ.

ADVERTISEMENT

ಹಳೇ ಶಿವಮೊಗ್ಗ ಭಾಗ ಹೊರತುಪಡಿಸಿ ಉಳಿದೆಡೆ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಸೋಮವಾರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ, ಹಲ್ಲೆ ಪ್ರಕರಣದಲ್ಲಿ ಗಾಯಗೊಂಡಿದ್ದ 20ಕ್ಕೂ ಜನರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿಗಳು ತೆರೆದಿವೆ. ಎಪಿಎಂಸಿ, ಇತರೆ ಮಾರುಕಟ್ಟೆಗಳು ಎಂದಿನಂತೆ ವಹಿವಾಟು ಆರಂಭಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.