ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರಿಸಲು ಮೋದಿ, ರಾಹುಲ್‌ಗೆ ಸೂಚನೆ

ಪಿಟಿಐ
Published 25 ಏಪ್ರಿಲ್ 2024, 7:45 IST
Last Updated 25 ಏಪ್ರಿಲ್ 2024, 7:45 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಬ್ಬರೂ ತಮ್ಮ ಹೇ:ಳಿಕೆಗಳ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕುರಿತಂತೆ ಪರಿಶೀಲನೆ ನಡೆಸಿರುವ ಚುನಾವಣಾ ಆಯೋಗವು ಏಪ್ರಿಲ್ 29ರ ಬೆಳಿಗ್ಗೆ 11ಗಂಟೆ ಒಳಗೆ ಉತ್ತರಿಸುವಂತೆ ಸೂಚಿಸಿದೆ.

ಮುಸ್ಲಿಂ ಎಂಬ ಪದ ಬಳಸದೆ ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದು ಹೇಳುವ ಮೂಲಕ ಮೋದಿ, ದೇಶದಲ್ಲಿ ಬಡತನ ಹೆಚ್ಚುತ್ತಿದೆ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಾತಿ, ಧರ್ಮ, ಭಾಷೆ ಮತ್ತು ಸಮುದಾಯದ ಆಧಾರದ ಮೇಲೆ ಇಬ್ಭಾಗಿಸುವ ಮತ್ತು ದ್ವೇಷ ಹರಡುವ ಹೇಳಿಕೆ ನೀಡಲಾಗಿದೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಆರೋಪಿಸಿವೆ.

ADVERTISEMENT

ಮೋದಿ ಹೇಳಿಕೆ ಕುರಿತಂತೆ ಪ್ರತಿಕ್ರಿಯೆಗೆ ಆರಂಭದಲ್ಲಿ ನಿರಾಕರಿಸಿದ್ದ ಚುನಾವಣಾ ಆಯೋಗವು, ಬಿಜೆಪಿ ನಾಯಕ ನೀಡಿದ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಬಳಿಕ ಉತ್ತರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.