ADVERTISEMENT

ಅಮೇಠಿ, ರಾಯ್ ಬರೇಲಿಯಿಂದ ರಾಹುಲ್, ಪ್ರಿಯಾಂಕಾ ಸ್ಪರ್ಧೆ ಸಾಧ್ಯತೆ:ಮೂಲಗಳ ಮಾಹಿತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಏಪ್ರಿಲ್ 2024, 6:43 IST
Last Updated 25 ಏಪ್ರಿಲ್ 2024, 6:43 IST
<div class="paragraphs"><p>ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ</p></div>

ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ

   

ನವದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಠಿ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್ 26ರ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಮುಂದಿನ ವಾರ ಇಬ್ಬರೂ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ADVERTISEMENT

ರಾಹುಲ್ ಗಾಂಧಿ ಈಗಾಗಲೇ ಕೇರಳದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಅಲ್ಲಿ ನಾಳೆ ಮತದಾನ ನಡೆಯಲಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿಯನ್ನು ಸ್ಮೃತಿ ಇರಾನಿ ಮಣಿಸಿದ್ದರು. ಈ ಬಾರಿಯೂ ಸ್ಮೃತಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಾಡಿಕೊಳ್ಳಲಾಗಿರುವ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಮತ್ತು ಸಮಾಜವಾದಿ ಪಕ್ಷ ಉಳಿದ 63 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.

ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆ ರಾಯ್‌ ಬರೇಲಿ ಮತ್ತು ಅಮೇಠಿ ಜೊತೆಗೆ ವಾರಾಣಸಿ, ಗಾಜಿಯಾಬಾದ್ ಮತ್ತು ಕಾನ್ಪುರದಲ್ಲೂ ಕಾಂಗ್ರೆಸ್ ಸ್ಪರ್ಧಿಸುತ್ತಿದೆ.

ಅಮೇಠಿಯ ಗೌರಿಗಂಜ್‌ನ ಪಕ್ಷದ ಕಚೇರಿ ಬಳಿ ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ ಪೋಸ್ಟರ್‌ಗಳು ಕಂಡುಬಂದಿದ್ದರಿಂದ ವಾದ್ರಾ ಅವರೇ ಇಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹ ಎದ್ದಿದ್ದವು.

ರಾಯ್ ಬರೇಲಿ ಮತ್ತು ಅಮೇಠಿಯಲ್ಲಿ 5ನೇ ಹಂತದಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.