ADVERTISEMENT

ದೆಹಲಿ: ಇದೇ ಮೊದಲ ಬಾರಿಗೆ 40 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ

ಪಿಟಿಐ
Published 27 ಏಪ್ರಿಲ್ 2024, 3:08 IST
Last Updated 27 ಏಪ್ರಿಲ್ 2024, 3:08 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಬಾರಿಯ ಬೇಸಿಗೆ ಕಾಲದ ಗರಿಷ್ಠ ತಾಪಮಾನ ದಾಖಲಾಗಿದೆ. ಈ ವರ್ಷ ಇದೇ ಮೊದಲ ಬಾರಿಗೆ ನಗರದ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಅನ್ನು ದಾಟಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಶುಕ್ರವಾರ ದೆಹಲಿಯಲ್ಲಿ 40.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಈ ಋತುವಿನಲ್ಲಿ ದಾಖಲಾದ ಸರಾಸರಿ ಉಷ್ಣಾಂಶಕ್ಕಿಂತ ಅಧಿಕವಾಗಿದೆ ಎಂದು ಇಲಾಖೆ ಹೇಳಿದೆ.

ADVERTISEMENT

ಸಂಜೆಯ ವೇಳೆಗೆ ಹವಾಮಾನದಲ್ಲಿ ಹಠಾತ್‌ ಬದಲಾವಣೆ ಕಂಡುಬಂದಿದ್ದು, ನಗರದ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ.

ಈ ಋತುವಿನಲ್ಲಿ ಏಪ್ರಿಲ್‌ 20ರಂದು 39.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು ಎಂದು ಇಲಾಖೆ ಹೇಳಿದೆ.

ಇಂದು (ಶನಿವಾರ) ಗುಡುಗು ಸಹಿತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗಲಿದೆ. ನಗರದ ತಾಪಮಾನವು ಗರಿಷ್ಠ 39 ಮತ್ತು ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಗೊಳ್ಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.