ADVERTISEMENT

ಉತ್ತರ ಪ್ರದೇಶ | ಶಹಜಹಾನ್‌ಪುರ ಲೋಕಸಭಾ ಕ್ಷೇತ್ರದ ಎಸ್‌ಪಿ ಅಭ್ಯರ್ಥಿ ಬದಲು

ಪಿಟಿಐ
Published 27 ಏಪ್ರಿಲ್ 2024, 14:22 IST
Last Updated 27 ಏಪ್ರಿಲ್ 2024, 14:22 IST
.
.   

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಸಮಾಜವಾದಿ ಪಕ್ಷವು (ಎಸ್‌ಪಿ)  ಬದಲಿಸಿದೆ.

ರಾಜೇಶ್‌ ಕಶ್ಯಪ್‌ ಅವರ ಬದಲಿಗೆ ಜ್ಯೋತ್ಸ್ನಾ ಗೊಂಡ ಅವರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಲಾಗಿದೆ.

ರಾಜೇಶ್‌ ಕಶ್ಯಪ್‌ ಅವರು ಏಪ್ರಿಲ್‌ 22 ರಂದು ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರ ತಿರಸ್ಕೃತಗೊಂಡ ಕಾರಣ ಜ್ಯೋತ್ಸ್ನಾ ಅವರು ಏಪ್ರಿಲ್‌ 24 ರಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿ ತಿಳಿಸಿದರು. ಶಹಜಹಾನ್‌ಪುರ ಕ್ಷೇತ್ರಕ್ಕೆ ಮೇ 13ರಂದು ಮತದಾನ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.