ADVERTISEMENT

ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಏಪ್ರಿಲ್ 2024, 5:22 IST
Last Updated 26 ಏಪ್ರಿಲ್ 2024, 5:22 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಮತ ಎಣಿಕೆ ವೇಳೆ ಇವಿಎಂಗಳಲ್ಲಿನ ಮತಗಳು ಮತ್ತು ವಿವಿ– ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು (ಶುಕ್ರವಾರ) ವಜಾಗೊಳಿಸಿದೆ.

ನ್ಯಾಯಾಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಾಂಕರ್‌ ದತ್ತ ಅವರನ್ನು ಒಳಗೊಂಡ ನ್ಯಾಯಪೀಠವು ತೀರ್ಪು ನೀಡಿದೆ.

ADVERTISEMENT

ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಅರ್ಜಿದಾರರಲ್ಲಿ ಒಬ್ಬರಾಗಿರುವ ಅಸೋಷಿಯೇಷನ್‌ ಫಾರ್‌ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆಯು, ಇವಿಎಂಗಳಲ್ಲಿನ ಪಾರದರ್ಶಕ ಗಾಜಿನ ಬದಲು ಅರೆಪಾರದರ್ಶಕ ಗಾಜನ್ನು ಅಳವಡಿಸುವ ಆಯೋಗದ 2017ರ ನಿರ್ಧಾರವನ್ನು ಕೈಬಿಡುವಂತೆ ಹಾಗೂ ಮತಪತ್ರಗಳ ಮೂಲಕ ಮತ ಚಲಾಯಿಸುವ ಪದ್ಧತಿಯನ್ನೆ ಜಾರಿಗೆ ತರುವಂತೆ ಮನವಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.