ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯ ತೆರಿಗೆ ವಿವರ ಸಲ್ಲಿಕೆ: ‘ಸುಪ್ರೀಂ’ ಆದೇಶ

Last Updated 14 ಮಾರ್ಚ್ 2016, 19:43 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್‌ ಅವರ ಸಂಬಂಧಿಗಳ ಆದಾಯ ತೆರಿಗೆ ಪಾವತಿ ವಿವರಗಳನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಕಾಮನ್‌ ಕಾಸ್‌’ ಹೆಸರಿನ ಸರ್ಕಾರೇತರ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಕ್‌
ಮಿಶ್ರಾ ಮತ್ತು ಶಿವಕೀರ್ತಿ ಸಿಂಗ್‌ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ.

ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ವಿವರಗಳ ಪಟ್ಟಿಯನ್ನು ಸಲ್ಲಿಸುವಂತೆ ಪೀಠವು ಅಟಾರ್ನಿ ಜನರಲ್‌ ಮುಕುಲ್‌ ರೋಹಟಗಿ ಅವರಿಗೆ ಸೂಚಿಸಿತು.
ವಾದ ಮಂಡಿಸಿದ ರೋಹಟಗಿ ಅವರು, ‘ಬಾಲಕೃಷ್ಣನ್‌ ಸಹೋದರರು, ಸಹೋದರಿಯರು ಮತ್ತು ಸಂಬಂಧಿಕರು ಈ ತನಿಖಾ ವ್ಯಾಪ್ತಿಯಲ್ಲಿ ಬರುವುದಿಲ್ಲ. ಅವರೆಲ್ಲರೂ ಆದಾಯ ತೆರಿಗೆಪಾವತಿ ಮಾಡುತ್ತಿದ್ದಾರೆ’ ಎಂದರು.

ಬಾಲಕೃಷ್ಣನ್‌ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿದ್ದ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಅವರ ಸಂಬಂಧಿಗಳು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಎನ್‌ಜಿಒ ಆರೋಪಿಸಿದೆ. 

ಬಾಲಕೃಷ್ಣನ್‌ 2007ರ ಜನವರಿಯಿಂದ 2010ರ ಮೇ ವರೆಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಕರಣದ ಮುಂದಿನ ವಿಚಾರಣೆ ಜುಲೈ 12ಕ್ಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT