ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಜನ್ಮ ಶತಮಾನೋತ್ಸವ ಆಚರಣೆಯ ಪ್ರಯುಕ್ತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರಿಗೆ ‘ದೇವರಾಜ್ ಅರಸು ಸ್ಮಾರಕ ಪ್ರಶಸ್ತಿ’ ನೀಡಿ ಸನ್ಮಾನಿಸಲಾಗುವುದು’ ಎಂದು ಕೆ.ಪಿ.ಸಿ.ಸಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ಸಿ. ವೇಣುಗೋಪಾಲ್ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಅಂಬೇಡ್ಕರ್ ಭವನದಲ್ಲಿ ಜುಲೈ 20 ರಂದು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪ್ರಶಸ್ತಿ ಐವತ್ತು ಸಾವಿರ ನಗದು ಮತ್ತು ಫಲಕವನ್ನು ಹೊಂದಿದೆ’ ಎಂದು ತಿಳಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.