ಬೆಂಗಳೂರು:  ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಗೆ ಮಹಿಳಾ ಪ್ರತಿನಿಧಿಯಾಗಿ ಡಾ. ವಸುಂಧರಾ ಭೂಪತಿ, ಪರಿಶಿಷ್ಟ ಜಾತಿ ಪ್ರತಿನಿಧಿಯಾಗಿ ಬಿ.ಟಿ. ಲಲಿತಾ ನಾಯಕ್ ಮತ್ತು ಸಂಘಸಂಸ್ಥೆಗಳ ಪ್ರತಿನಿಧಿಯಾಗಿ ಶೇಖರಗೌಡ ಮಾಲಿಪಾಟೀಲ ಅವರನ್ನು ನೇಮಕ ಮಾಡಲಾಗಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಮಾಹಿತಿ ನೀಡಿದರು. ರಾಯಚೂರಿನಲ್ಲಿಯೇ ಸಮ್ಮೇಳನ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿಯೇ ನಡೆಯಲಿದೆ ಎಂದು ಅವರು ತಿಳಿಸಿದರು.

2017ರ ಮಾರ್ಚ್ ಒಳಗಾಗಿ ದೆಹಲಿಯಲ್ಲಿ ಹೊರನಾಡ ಕನ್ನಡಿಗರ ಸಮ್ಮೇಳನ ನಡೆಸಲಾಗುವುದು. ಇದೇ ಮೊದಲ ಬಾರಿಗೆ ಪರಿಷತ್ತಿನಲ್ಲಿ ಮಾಧ್ಯಮ ಮತ್ತು ಸಾಂಸ್ಕೃತಿಕ ಉಪಸಮಿತಿ ರಚಿಸಲಾಗುವುದು.

ಪರಿಷತ್ತಿನ ನಿಯಮಕ್ಕೆ ತಿದ್ದುಪಡಿ ತರುವ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಸುಧಾರಿಸುವ ನಿಟ್ಟಿನಲ್ಲಿ ನ್ಯಾಯಾಧೀಶರನ್ನೊಳಗೊಂಡ ಉಪ ಸಮಿತಿಯನ್ನು ಸದ್ಯದಲ್ಲಿಯೇ ರಚಿಸಲಾಗುವುದು ಎಂದರು.

ಮನವಿ: ಬಿಬಿಎಂಪಿ ವ್ಯಾಪ್ತಿಯಲ್ಲಿ, ಖಾಸಗಿ ಕಟ್ಟಡದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ಯಾವುದೇ ತೆರಿಗೆ ವಿಧಿಸದಂತೆ ಬಿಬಿಎಂಪಿಗೆ ಮನವಿ ಮಾಡಲಾಗಿದೆ. ಆಯುಕ್ತರು ಇದಕ್ಕೆ ಒಪ್ಪಿದ್ದಾರೆ ಎಂದು ಮನು ಬಳಿಗಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.