ನಾಗಪುರ (ಐಎಎನ್‌ಎಸ್): ವಾಣಿಜ್ಯ ನಗರಿ ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಸಂಚುಕೋರ ಯಾಕೂಬ್ ಅಬ್ದುಲ್ ರಜಾಕ್ ಮೆಮನ್‌ನನ್ನು (53) ಜುಲೈ 30 ರಂದು ಗಲ್ಲಿಗೇರಿಸಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದಲ್ಲಿ ಜುಲೈ 30 ರಂದು ಬೆಳಿಗ್ಗೆ ಮೆಮನ್‌ನನ್ನು ಗಲ್ಲಿಗೇರಿಸಲಾಗುವುದು ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಧೃಡಪಡಿಸಿದ್ದಾರೆ. ಆದರೆ, ಅವರು ತಮ್ಮ ಹೆಸರು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಮೆಮನ್ ಸಲ್ಲಿಸಿದ್ದ ದಯಾ ಅರ್ಜಿಯನ್ನು ಇತ್ತೀಚೆಗೆ ರಾಷ್ಟ್ರಪತಿ ಅವರು ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಪಿ.ಸದಾಶಿವಂ ಹಾಗೂ ಬಿ.ಎಸ್.ಚೌಹಾಣ್ ಅವರಿದ್ದ ಪೀಠ ಮಾರ್ಚ್ 21ರಂದು ಮೆಮನ್ ಗಲ್ಲು ಶಿಕ್ಷೆಯನ್ನು ಸಮರ್ಥಿಸಿತ್ತು. ಈ ಪ್ರಕರಣದಲ್ಲಿ ಇನ್ನಿತರ ಹತ್ತು ಮಂದಿಗೆ ವಿಶೇಷ ಟಾಡಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಪೀಠ ಜೀವಾವಧಿಗೆ ಪರಿವರ್ತಿಸಿತ್ತು. ಆರ್‌ಡಿಎಕ್ಸ್ ಇಡಲಾಗಿದ್ದ ವಾಹನಗಳನ್ನು ಮುಂಬೈನ ವಿವಿಧ ಕಡೆ ನಿಲ್ಲಿಸಿದ್ದ ಆರೋಪ ಈ ಹತ್ತು ಮಂದಿಯ ಮೇಲಿದೆ.

ಯಾಕೂಬ್ ಮೆಮನ್ ಯಾರು?: ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟಂಟ್ ಆಗಿರುವ ಮೆಮನ್ ಭೂಗತ ಪಾತಕಿ ಟೈಗರ್ ಮೆಮನ್‌ನ ಸಹೋದರ.1993ರ ಸ್ಫೋಟದಲ್ಲಿ 257 ಮಂದಿ ಮೃತಪಟ್ಟಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.