ಉಡುಪಿ: ‘ನಾವು ಮಾಡುವ ಕೆಲಸದಲ್ಲಿ ನಿಷ್ಠೆಯಿದ್ದರೆ ಭಗವಂತನನ್ನು ಸಂತೋಷಡಿಸಬಹುದು’ ಎಂದು ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ಹೇಳಿದರು.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಅದಮಾರುಮಠದ ಶಿಕ್ಷಣ ಮಂಡಳಿಯಲ್ಲಿ ಆಡಳಿತಾಧಿಕಾರಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಎಸ್.ಎಲ್. ಕಾರ್ಣಿಕ್ ದಂಪತಿಯನ್ನು ಸನ್ಮಾನಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನೂತನ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಕಿಶೋರ್ ರಾವ್ ಅವರನ್ನು ಸ್ವಾಮೀಜಿ ಗೌರವಿಸಿದರು.
ಪೂರ್ಣಪ್ರಜ್ಞ ಕಾಲೇಜಿನ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್, ಕೋಶಾಧಿಕಾರಿ ಪ್ರದೀಪ್ ಕುಮಾರ್, ಪ್ರಾಂಶುಪಾಲರಾದ ಡಾ. ಜಗದೀಶ ಶೆಟ್ಟಿ, ಡಾ. ಟಿ.ಎಸ್. ರಮೇಶ್, ಸಂದೀಪ್ ಕುಮಾರ್, ನಿವೃತ್ತ ಪ್ರಾಂಶುಪಾಲ ಪ್ರೊ. ರಾಜ್ ಮೋಹನ್, ನಟರಾಜ ದೀಕ್ಷಿತ್, ಪಿಐಎಂನ ನಿರ್ದೇಶಕ ಡಾ. ಎಂ.ಆರ್. ಹೆಗ್ಡೆ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್ ಸಿದ್ದಾಪುರ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.