ಬಾಗಲಕೋಟೆ: ನಗರದಲ್ಲಿ ಅ.10 ಮತ್ತು 11ರಂದು 6ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಡಾ.ಅರ್ಜುನ ಗೊಳಸಂಗಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆಯಲಿರುವ ಈ ಸಮ್ಮೇಳನಕ್ಕೆ ದಲಿತ ಸಮುದಾಯ ಮತ್ತು ದಲಿತ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಹಿತಿಯೊಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು ಎಂದರು.

ಎರಡು ಸಂವಾದ ಗೋಷ್ಠಿ, ಕವಿಗೋಷ್ಠಿ ಸೇರಿದಂತೆ ಆರು ಗೋಷ್ಠಿಗಳು, ಪುಸ್ತಕ ಪ್ರದರ್ಶನ, ಚಿತ್ರಕಲಾ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಹಾಗೂ ಗೌರವ ಪ್ರಶಸ್ತಿ, ಪುಸ್ತಕ ಪ್ರಶಸ್ತಿ, ದಲಿತಚೇತನ, ದಲಿತ ಸಿರಿ, ದಲಿತಕಲಾ ಸಿರಿ, ಸಾವಿತ್ರಿ ಬಾಯಿಫುಲೆ ಪ್ರಶಸ್ತಿಗಳನ್ನು ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.