ಮೈಸೂರು: ಸಾಹಿತಿ ಸಿ.ಪಿ. ಕೃಷ್ಣಕುಮಾರ್, ಖ್ಯಾತ ವಿಮರ್ಶಕ ಜಿ.ಎಚ್. ನಾಯಕ ಮತ್ತು ರಾಜಕೀಯ ಚಿಂತಕ ಡಾ.ಆನಂದ್ ತೇಲ್ ತುಂಬ್ಡೆ ಅವರನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (ಕೆಎಸ್ಒಯು) ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಿದೆ ಎಂದು ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್ ತಿಳಿಸಿದ್ದಾರೆ.

ಮೇ 10ರಂದು ನಗರದ ಮಾನಸ ಗಂಗೋತ್ರಿಯ ಸೆನೆಟ್ ಸಭಾಂಗಣದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ಈ ಮೂರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ.ಮುಶಿರುಲ್ ಹಸನ್ ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಕುಲಪತಿ
ಪ್ರೊ.ಎಂ.ಜಿ.ಕೃಷ್ಣನ್ ಸಮಾರಂಭದಲ್ಲಿ ಭಾಗವಹಿಸುವರು.

ಪುರಸ್ಕಾರಕ್ಕೆ ಆಯ್ಕೆಯಾಗಿರುವ ಜಿ.ಎಚ್. ನಾಯಕ ವಿಮರ್ಶಾ ಕ್ಷೇತ್ರದಲ್ಲಿ, ಸಾಹಿತಿ ಸಿ.ಪಿ.ಕೃಷ್ಣಕುಮಾರ್ ಚುಟುಕು ಕವಿತೆಗಳಿಗೆ ಹೆಸರು ವಾಸಿಯಾಗಿದ್ದಾರೆ. ದಲಿತ ಚಳವಳಿಯ ಹಿನ್ನೆಲೆಯುಳ್ಳ ಸಾಮಾಜಿಕ ಕಾರ್ಯಕರ್ತ ಹಾಗೂ ರಾಜಕೀಯ ವಿಶ್ಲೇಷಕ ಡಾ.ಆನಂದ್ ತೇಲ್ ತುಂಬ್ಡೆ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮೊಮ್ಮಗಳ ಪತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.