ನ್ಯೂಯಾರ್ಕ್ (ಪಿಟಿಐ): 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಮೆರಿಕದ ಫೆಡರಲ್ ಕೋರ್ಟ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.

ನರೇಂದ್ರ ಮೋದಿ ಅವರು ಐದು ದಿನಗಳ ಅಮೆರಿಕ ಪ್ರವಾಸ ಪ್ರಾರಂಭಿಸಿರುವ ಬೆನ್ನಲ್ಲೇ ಈ ಸಮನ್ಸ್ ಜಾರಿಗೊಂಡಿರುವುದು ಮಹತ್ವ ಪಡೆದುಕೊಂಡಿದೆ.

‘ಗುರುವಾರ ಸಮನ್ಸ್ ನೀಡಲಾಗಿದೆ. 21 ದಿನಗಳ ಒಳಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಈ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

ನ್ಯೂಯಾರ್ಕ್ ಮೂಲದ ಮಾನವ ಹಕ್ಕುಗಳ ಸಂಸ್ಥೆ ಅಮೆರಿಕನ್ ಜಸ್ಟೀಸ್ ಸೆಂಟರ್ (ಎಜೆಸಿ) ಮತ್ತು ಗುಜರಾತ್ ಗಲಭೆಯಲ್ಲಿ ಬದುಕುಳಿದ ಇಬ್ಬರು ವ್ಯಕ್ತಿಗಳು ಮೋದಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದರು.

‘ಎಜೆಸಿ’ ಸಲ್ಲಿಸಿರುವ 28 ಪುಟಗಳ ದೂರಿನಲ್ಲಿ 2002ರ ಗುಜರಾತ್ ಕೋಮುದಳ್ಳುರಿ ಸಂಘಟಿತ ಅಪರಾಧ. ಇದರ ಹಿಂದೆ ಆಗ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ವ್ಯವಸ್ಥಿತ ಕೈವಾಡ ಇದೆ. ಇಡೀ ಮನುಕುಲ ವಿರೋಧಿಯಾಗಿ ಅವರು ಅಪರಾಧ ಎಸಗಿದ್ದಾರೆ ಎನ್ನಲಾಗಿದೆ.

ನರೇಂದ್ರ ಮೋದಿ ಅವರು ಸೆ.29 ಮತ್ತು 30ರಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ, ಮೋದಿ ವಿರೋಧಿ ಸಂಘಟನೆಗಳು ನ್ಯೂಯಾರ್ಕ್ ಮತ್ತು ವಾಷಿಂಗ್ಟನ್‌ನಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.