ಬುಧವಾರ, 25 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಗೀತ ವಿ.ವಿ ಕುಲಪತಿಯಾಗಿ ಸರ್ವಮಂಗಳಾ

Published : 5 ಮೇ 2014, 19:30 IST
ಫಾಲೋ ಮಾಡಿ
Comments

ಮೈಸೂರು: ಬೆಂಗಳೂರಿನ ಮಹಾ­ರಾಣಿ ಕಲಾ ಕಾಲೇಜಿನ ಸಂಗೀತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಈಚೆಗೆ ನಿವೃತ್ತರಾದ ಪ್ರೊ.­ಸರ್ವಮಂಗಳಾ ಶಂಕರ್‌ ಅವರನ್ನು ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ­ವಿದ್ಯಾಲಯ ಕುಲಪತಿಯಾಗಿ ಸರ್ಕಾರ ನೇಮಕ ಮಾಡಿದೆ.

ಸಂಗೀತ ವಿಷಯದಲ್ಲಿ ಎಂ.ಎ, ಎಂ.ಫಿಲ್‌ ಮತ್ತು ಪಿಎಚ್‌.ಡಿ ಪದವಿ ಗಳಿಸಿರುವ ಇವರು ಸಂಗೀತ ಕ್ಷೇತ್ರ­ದಲ್ಲಿ ಮೂರು ದಶಕಗಳಿಗೂ ಮಿಕ್ಕಿ ಸೇವೆ ಸಲ್ಲಿಸಿದ್ದಾರೆ.

ಸರ್ವಮಂಗಳಾ ಅವರು ಮಂಗಳ­ವಾರ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಗಂಗೂ­ಬಾಯಿ ಹಾನಗಲ್‌ ಸಂಗೀತ ವಿ.ವಿ.ಕುಲಸಚಿವ ಪ್ರೊ. ಸಿದ್ದೇಗೌಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT