ಧಾರವಾಡ : ‘81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಅವಕಾಶವನ್ನು ನಮಗೆ ನೀಡಿದಲ್ಲಿ ಆತಿಥ್ಯ ವಹಿಸಲು ಸಿದ್ಧವಿದ್ದೇವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಕಸಾಪ ಶತಮಾನೋತ್ಸವ ಸಮಾರಂಭವನ್ನು ಜಿಲ್ಲಾ ಘಟಕದಿಂದ ಈಗಾಗಲೇ ಯಶಸ್ವಿಯಾಗಿ ಸಂಘಟಿಸಿದ್ದೇವೆ. ಅದೇ ರೀತಿ ಅಖಿಲ ಭಾರತ ಸಾಹಿತ್ಯ ಸಮ್ಮೇಳವನ್ನೂ ಮಾಡಲು ಸಿದ್ಧರಿದ್ದೇವೆ’ ಎಂದರು.

‘ಶತಮಾನೋತ್ಸವದಂತಹ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಪುಂಡಲೀಕ ಹಾಲಂಬಿ ನಮಗೆ ಅವಕಾಶ ನೀಡಿದ್ದರು. ಹಾಗಾಗಿ ನಾವಾಗಿಯೇ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ಜಿಲ್ಲೆಗೆ ಕೊಡಿ ಎಂದು ಕೇಳುವುದಿಲ್ಲ. ಅವರಾಗಿಯೇ ಕೊಟ್ಟರೆ ಯಶಸ್ವಿಯಾಗಿ ನಿಭಾಯಿಸುತ್ತೇವೆ’ ಅಂಗಡಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.