ನವದೆಹಲಿ (ಪಿಟಿಐ): ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನೆಚ್ಚಿನ 'ಸ್ವಚ್ಛ ಭಾರತ' ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿದರು.

ಜಯಂತಿ ಅಂಗವಾಗಿ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್‌ಶಾಸ್ತ್ರಿ ಅವರ ಸ್ಮಾರಕಗಳಿಗೆ ಪುಷ್ಪನಮನ ಸಲ್ಲಿಸಿದ ಬಳಿಕ ಪ್ರಧಾನಿ ಅವರು, ಸ್ವಚ್ಛ ಭಾರತ ಅಭಿಯಾನಕ್ಕೆ ರಾಜಪಥ್‌ನಲ್ಲಿ ಅಧಿಕೃತವಾಗಿ ಚಾಲನೆ ನೀಡುವ ಮೊದಲು ಪೌರ ಕಾರ್ಮಿಕರ ಕಾಲೋನಿ ವಾಲ್ಮೀಕಿ ಬಸ್ತಿಗೆ ತೆರಳಿ ಕಸಗುಡಿಸಿದರು.

ಇಲ್ಲಿನ ಮಂದಿರ ಮಾರ್ಗಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ಅವರು ಸ್ಥಳೀಯ ಪೊಲೀಸ್ ಠಾಣೆಗೆ ದಿಢೀರ್ ತೆರಳಿ ಸ್ವಚ್ಛತೆಯನ್ನು ಪರಿಶೀಲಿಸಿದರು.ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಮೋದಿ ಅವರಿಗೆ ಹಲವು ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.

‘ಜನ್ಮ ದಿನದ ಅಂಗವಾಗಿ ನಾನು ಗಾಂಧೀಜಿ ಅವರಿಗೆ ನಮನ ಸಲ್ಲಿಸುತ್ತೇನೆ. ಅವರ ಚಿಂತನೆ ಹಾಗೂ ವಿಚಾರಧಾರೆಗಳು ನಮಗೆ ಇಂದಿಗೂ ಸ್ಫೂರ್ತಿದಾಯಕ. ಗಾಂಧೀಜಿ ಅವರು ಕಂಡಿದ್ದ ಭಾರತವನ್ನು ನಿರ್ಮಿಸಲು ನಮ್ಮನ್ನು ನಾವು ಸಮರ್ಪಿಸಿಕೊಳ್ಳೊಣ’ ಎಂದು ಮೋದಿ ಅವರು ಸರಣಿಯಾಗಿ ಟ್ವೀಟ್ ಮಾಡಿದ್ದಾರೆ.

ಶಾಸ್ತ್ರಿ ಅವರ ಪ್ರಸಿದ್ಧ ‘ಜೈ ಜವಾನ್ ಜೈ ಕಿಸಾನ್’ ಉಕ್ತಿಯನ್ನೂ ಪ್ರಧಾನಿ ಸ್ಮರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.