ಇಂಚೆನ್: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿಸಿದ ಭಾರತ ಪುರುಷರ ಹಾಕಿ ತಂಡವು 16 ವರ್ಷಗಳ ಬಳಿಕ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿತು. ಈ ಮೂಲಕ 2016ರಲ್ಲಿ ರಿಯೊ ಡಿ ಜನೈರೊದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆಯಿತು.

ಗುರುವಾರ ನಡೆದ ಫೈನಲ್‌ನಲ್ಲಿ ಉಭಯ ತಂಡಗಳು ನಿಗದಿತ ಅವಧಿಯಲ್ಲಿ 1–1 ಗೋಲುಗಳಿಂದ ಸಮಬಲ ಸಾಧಿಸಿದ್ದವು. ಆದರೆ, ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 4–2ರಲ್ಲಿ ಗೆಲುವು ಪಡೆಯಿತು.

ರಿಲೇಯಲ್ಲಿ ಚಿನ್ನ: ಕರ್ನಾಟಕದ ಎಂ.ಆರ್. ಪೂವಮ್ಮ ಅವರನ್ನೊಳಗೊಂಡ ಭಾರತದ ಮಹಿಳಾ ತಂಡ 4X400ಮೀ. ರಿಲೇಯಲ್ಲಿ ಚಿನ್ನ ಜಯಿಸಿತು. ಗುರುವಾರ ಭಾರತ ಒಟ್ಟು ಐದು ಪದಕಗಳನ್ನು ಗೆದ್ದಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.