ಉಡುಪಿ: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಇತ್ತೀಚೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ನಡೆದ ತುಳು ಯುವ ಪ್ರತಿಭಾ ಸಮ್ಮೇಳನವನ್ನು ಅಕಾಡೆಮಿ ಅಧ್ಯಕ್ಷೆ ಜಾನಕಿ ಬ್ರಹ್ಮಾವರ ಉದ್ಘಾಟಿಸಿದರು.

ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಬಳಸುವ ಸುಂದರ ಭಾಷೆ ತುಳು. ಅದನ್ನು ಎಲ್ಲರೂ ಕಲಿಯಬೇಕು ಮತ್ತು ಬೆಳೆಸಬೇಕು ಎಂದರು.
ಮಂಗಳೂರು ಸಂತ ಅಲೋಶಿಯಸ್ ಸಂಧ್ಯಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಹಾಲಿಂಗ ಭಟ್ ಮಾತನಾಡಿ, ತುಳು ಸಂಸ್ಕೃತಿ, ಆಚಾರ ವಿಚಾರಗಳು ಬಹಳ ವಿಶಿಷ್ಟವಾದದ್ದು. ಅದನ್ನು ಇತರರಿಗೂ ತಿಳಿಸುವ ಕೆಲಸ ಯುವಪೀಳಿಗೆಯಿಂದ ಆಗಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ನೇರಿ ಕರ್ನೇಲಿಯೊ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಇಂದಿನ ಯುವ ಸಮುದಾಯ ತುಳು ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವತ್ತಾ ಕಾರ್ಯ ಪ್ರವೃತ್ತವಾಗಬೇಕು ಎಂದರು.

ಪ್ರೊ. ನಾರಾಯಣ ಎಂ. ಹೆಗಡೆ ಸ್ವಾಗತಿಸಿದರು, ಉಪನ್ಯಾಸಕಿ ಎಂ.ಡಿ. ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು, ಉಪನ್ಯಾಸಕ ರವಿನಂದನ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.