ಬೆಂಗಳೂರು: 2013–14ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ.

ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮೆರೆದವರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಕೇಂದ್ರ, ರಾಜ್ಯ ಸರ್ಕಾರದಿಂದ ಅಥವಾ ಅವುಗಳ ಅಂಗ ಸಂಸ್ಥೆಗಳಿಂದ, ಕೃಷಿ ಕ್ಷೇತ್ರದಲ್ಲಿನ ಸಾಧನೆಗೆ ಈಗಾಗಲೇ ಪ್ರಶಸ್ತಿ ಪಡೆದವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮತ್ತು ಸರ್ಕಾರದ ಅಂಗ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರು ಮತ್ತು ನಿವೃತ್ತರಾದವರು ಅರ್ಜಿ ಸಲ್ಲಿಸುವಂತಿಲ್ಲ.

ಅರ್ಜಿಯ ನಮೂನೆಗಳನ್ನು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ರೈತ ಸಂಪರ್ಕ ಕೇಂದ್ರಗಳಿಂದ ಪಡೆಯಬಹುದು ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಅರ್ಜಿಗಳನ್ನು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು, ಕೃಷಿ ವಿಶ್ವವಿದ್ಯಾಲಯಗಳ ತಜ್ಞರ ಶಿಫಾರಸು ಪಡೆದು ಈ ವಿಳಾಸಕ್ಕೆ ಕಳುಹಿಸಬೇಕು: ಜಂಟಿ ಕೃಷಿ ನಿರ್ದೇಶಕರು (ವಿಸ್ತರಣೆ ಮತ್ತು ತರಬೇತಿ), ಕೃಷಿ ಇಲಾಖೆ, ಶೇಷಾದ್ರಿ ರಸ್ತೆ, ಬೆಂಗಳೂರು - ೫೬೦ ೦೦೧. ಈ ತಿಂಗಳ 31ನೇ ತಾರೀಕು ಅರ್ಜಿ ಸಲ್ಲಿಸಲು ಕಡೆಯ ದಿನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.