ಬೆಂಗಳೂರು:  ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ನಡೆಸಲಿರುವ ‘ಎ’ ಮತ್ತು ‘ಬಿ’ ಶ್ರೇಣಿಯ 440 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳ ಮಹಾಪೂರವೇ ಹರಿದುಬಂದಿದೆ.

ಒಟ್ಟು 3,07,272 ಅರ್ಜಿಗಳು ಬಂದಿವೆ. ಈ ಪೈಕಿ, 2,62,515 ಅಭ್ಯರ್ಥಿಗಳು ಪ್ರವೇಶ ಶುಲ್ಕ ಪಾವತಿಸಿದ್ದಾರೆ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ಪರಿಗಣಿಸಲಾಗಿಲ್ಲ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

ಅರ್ಜಿ ಸಲ್ಲಿಕೆಯ ದೃಢೀಕರಣಕ್ಕಾಗಿ, ಶುಲ್ಕ ಪಾವತಿಸಿದ ಅಭ್ಯರ್ಥಿಗಳ ಇ–ಮೇಲ್‌ಗೆ ಅವರ ಅರ್ಜಿಯ ಪ್ರತಿಯನ್ನು ಕೆಪಿಎಸ್‌ಸಿ ಕಳುಹಿಸಲಿದೆ. ಒಂದು ವೇಳೆ, ಬರದಿದ್ದರೆ, ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಚಲನ್‌ನೊಂದಿಗೆ ನೇರವಾಗಿ ಕೆಪಿಎಸ್‌ಸಿ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಹುದ್ದೆಗಳಿಗೆ ಕೆಪಿಎಸ್‌ಸಿಯು ಜನವರಿ 21ರಂದು ಅಧಿಸೂಚನೆ ಹೊರಡಿಸಿತ್ತು. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 20ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ: 2011ರಲ್ಲಿ ನಡೆದಿದ್ದ ನೇಮಕಾತಿಗೆ ಹೋಲಿಸಿದರೆ ಈ ಹೆಚ್ಚು ಅರ್ಜಿಗಳು ಬಂದಿವೆ.
2011ರಲ್ಲಿ 1.25 ಲಕ್ಷ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ, 90 ಸಾವಿರ ಅಭ್ಯರ್ಥಿಗಳು ಪ್ರಾಥಮಿಕ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದರು.

ನಿಗದಿಯಂತೆ ಪರೀಕ್ಷೆ:  ಏಪ್ರಿಲ್ 19ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಕೆಪಿಎಸ್‌ಸಿಯು ಈಗಾಗಲೇ ಸಿದ್ಧತೆಗಳನ್ನೂ ಆರಂಭಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.