ಬೆಂಗಳೂರು: ‘ದೇವರ ದಾಸಿಮಯ್ಯ ಜಯಂತಿ’ ಕಾರ್ಯಕ್ರಮದಲ್ಲಿ ‘ದೇವರದಾಸಿಮಯ್ಯ ವಚನಕಾರನೇ ಅಲ್ಲ ಜೇಡರ ದಾಸಿಮಯ್ಯ ಆದ್ಯ ವಚನಕಾರ’ ಎಂದು ಗದ್ದಲ ಸೃಷ್ಟಿಸಿದ ಪರಿಣಾಮ ಹಿರಿಯ ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿ ಹಾಗೂ ಮತ್ತಿತ್ತರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 'ದೇವರದಾಸಿಮಯ್ಯ ವಚನಕಾರನೇ ಅಲ್ಲ ಜೇಡರ ದಾಸಿಮಯ್ಯ ಆದ್ಯ ವಚನಕಾರ’ ಎಂದು ಚಿದಾನಂದ ಮೂರ್ತಿ, ವಕೀಲೆ ಪ್ರಮೀಳಾ ನೇಸರ್ಗಿ, ಡಾ.ಎಸ್. ವಿದ್ಯಾಶಂಕರ ಮತ್ತಿತರರು ಗದ್ದಲ ಸೃಷ್ಟಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ಹೊರಗೆ ಕರೆದೊಯ್ದರು.

ಘಟನೆ ಕುರಿತು ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಅವರು ಹೇಳಿದ ವಿಷಯದಲ್ಲಿ ಸರ್ಕಾರ ಏಕಾಏಕಿ ತೀರ್ಮಾನ ಮಾಡುವಂತಿಲ್ಲ. ತಜ್ಞರಿಂದ ಪರಿಶೀಲನೆ ನಡೆಸಲಾಗುವುದು. ಬಹುಸಂಖ್ಯಾತ ನೇಕಾರರ ಬಹುದಿನದ ಬೇಡಿಕೆಯಂತೆ ಸರ್ಕಾರ ಈ ಕಾರ್ಯಕ್ರಮ ಆಯೋಜಿಸಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.