ಮೈಸೂರು: ‘ರೈತರು ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಬೆಳೆಗಳಿಗೆ ಸರ್ಕಾರ ವೈಜ್ಞಾನಿಕ ಬೆಲೆ ಕೊಡಬೇಕು’ ಎಂದು ಪ್ರಗತಿಪರ ರೈತ ಪುಟ್ಟಯ್ಯ ಒತ್ತಾಯಿಸಿದರು.

ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ಈ ಬಾರಿಯ ‘ನಾಡಹಬ್ಬ ಮೈಸೂರು ದಸರಾ’ವನ್ನು ಚಾಮುಂಡಿದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನಾಡಿನ ಜನತೆಗೆ ದಸರಾ ಶುಭಾಶಯ ಕೋರುತ್ತೇನೆ ಎಂದರು.

‘ಜನರ ಹಬ್ಬವಾದ ದಸರಾವನ್ನು ಸರ್ಕಾರ ಸಂಭ್ರಮ ಹಾಗೂ ಸಡಗರಿಂದ ಆಚರಿಸುತ್ತಿದೆ. ಆದರೆ, ಈ ವರ್ಷ ಬರಗಾಲ ಇರುವ ಕಾರಣ ಸರಳವಾಗಿ ಆದರೆ ಸಾಂಪ್ರದಾಯಿಕವಾಗಿ ಆಚರಿಸುತ್ತಿದ್ದೇವೆ. ರೈತರು ಆತ್ಮಹತ್ಯೆಯಂಥ ದುಸ್ಸಾಹಸಕ್ಕೆ ಕೈಹಾಕಬಾರದು. ರೈತರೊಂದಿಗೆ ಸರ್ಕಾರ ಸದಾ ಇರುತ್ತದೆ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.