ಇಸ್ಲಾಮಾಬಾದ್ (ಪಿಟಿಐ);  ಇನ್ನು 24 ಗಂಟೆಯೊಳಗಡೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಪಾಕ್ ಪ್ರಧಾನಿ ನವಾಜ್ ಷರೀಫ್ ಅವರಿಗೆ ಸರ್ಕಾರದ ವಿರುದ್ಧ ಬಂಡೆದ್ದಿರುವ ಖಾದ್ರಿ ಅವರು ಶನಿವಾರ ಮತ್ತೆ ಗಡುವು ನೀಡಿದ್ದಾರೆ.

ಪಾಕಿಸ್ತಾನದಲ್ಲಿ ರಾಜಕೀಯ ಅಸ್ಥಿರತೆ ಮತ್ತಷ್ಟು ಉಲ್ಬಣಗೊಂಡಿದೆ. ಕಳೆದ ಎರಡು ವಾರಗಳಿಂದ ಖಾದ್ರಿ ಅವರು ರಾಜೀನಾಮೆ ನೀಡುವಂತೆ ಷರೀಫ್ ಅವರನ್ನು ಒತ್ತಾಯಿಸುತ್ತ ಬಂದಿದ್ದಾರೆ.

ಇಂದು ಪಿಟಿಐ ಪಕ್ಷದ ಮುಖಂಡ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿರುವ ಖಾದ್ರಿ ಅವರು 24 ಗಂಟೆಯೊಳಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಒಂದು ವೇಳೆ ರಾಜೀನಾಮೆಯನ್ನು ನೀಡದಿದ್ದರೆ ಮುಂದೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ ಎಂದು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಖಾದ್ರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.