ಬೆಂಗಳೂರು: ವಿಜ್ಞಾನಿ ಪ್ರೊ.ಸಿ.ಎನ್.ಆರ್.ರಾವ್ ಅವರಿಗೆ ಕ್ಯಾನ್ಬೆರಾದಲ್ಲಿರುವ ಆಸ್ಟ್ರೇಲಿಯನ್ ನ್ಯಾಷನಲ್ ವಿಶ್ವವಿದ್ಯಾಲಯದ ‘ಡಿಗ್ರಿ ಆಫ್ ಡಾಕ್ಟರ್ ಆಫ್ ಸೈನ್ಸ್ ಆನರಿಸ್ ಕಾಸಾ’ ಗೌರವ ಲಭಿಸಿದೆ.

ಈಗಾಗಲೇ ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದ ಹಲವು ಪುರಸ್ಕಾರಗಳಿಗೆ ಪಾತ್ರರಾಗಿರುವ ಅವರ ಕಿರೀಟಕ್ಕೆ ಮತ್ತೊಂದು ಗರಿ ಸೇರಿದಂತಾಗಿದೆ. ಸಿ.ಎನ್.ಆರ್ ಅವರು ರಾಷ್ಟ್ರೀಯ ಸಂಶೋಧನಾ ಪ್ರೊಫೆಸರ್ ಹಾಗೂ ಜವಾಹರಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ (ಜೆಎನ್ಸಿಎಎಸ್ಆರ್) ಗೌರವ ಅಧ್ಯಕ್ಷರಾಗಿದ್ದಾರೆ.

ಗೌರವ ಡಾಕ್ಟರೇಟ್: ಜೆಎನ್ಸಿಎಎಸ್ಆರ್ನ ಮಲ್ಟಿ ಮೀಡಿಯಾ ಗ್ರೂಪ್‌ನ ಗೌರವ ಸಂಯೋಜಕಿ ಇಂದುಮತಿ ರಾವ್ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ.

ಮಾರ್ಚ್ 3ರಂದು ವಿಜಯಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.