ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹500, ಬೆಳ್ಳಿ ₹400 ಏರಿಕೆ

Published 2 ಮೇ 2024, 14:12 IST
Last Updated 2 ಮೇ 2024, 14:12 IST
ಅಕ್ಷರ ಗಾತ್ರ

ನವದೆಹಲಿ: ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದರಿಂದ ಸುರಕ್ಷಿತ ಹೂಡಿಕೆಯಾದ ಹಳದಿ ಲೋಹದತ್ತ ಹೂಡಿಕೆದಾರರು ಚಿತ್ತ ಹರಿಸಿದ್ದಾರೆ. ಹಾಗಾಗಿ, ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಾಗಿದೆ.

10 ಗ್ರಾಂ ಚಿನ್ನದ ದರ ₹500 ಏರಿಕೆಯಾಗಿ ₹72,350ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆಯು ಕೆ.ಜಿಗೆ ₹400 ಹೆಚ್ಚಳವಾಗಿ ₹83,500ಕ್ಕೆ ಮುಟ್ಟಿದೆ. 

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,304 ಡಾಲರ್‌ (ಅಂದಾಜು ₹1.92 ಲಕ್ಷ) ಮತ್ತು 26.45 (ಅಂದಾಜು ₹2,208) ಡಾಲರ್‌ನಂತೆ ಮಾರಾಟವಾಗಿದೆ.

‘ಫೆಡರಲ್‌ ರಿಸರ್ವ್‌ ಬಡ್ಡಿದರ ಕಡಿತ ಮಾಡಿಲ್ಲ. ಮತ್ತೊಂದೆಡೆ ಡಾಲರ್‌ ಮೌಲ್ಯ ಇಳಿಕೆಯಾಗುತ್ತಿದೆ. ಹಾಗಾಗಿ, ಹೂಡಿಕೆದಾರರು ಚಿನ್ನ ಖರೀದಿಗೆ ಮುಂದಾಗಿರುವುದರಿಂದ ಬೆಲೆ ಏರಿಕೆಯಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸೌಮಿಲ್‌ ಗಾಂಧಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT