ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಈ ಬಾರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಗೆದ್ದು ಇತಿಹಾಸ ಸೃಷ್ಟಿಸುತ್ತೆ ಎಂದರು. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತನಾಡಿ ಹಣ ಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.