ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಸಾವು, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ಕಾಗೆಗೆ ಚುನಾವಣೆ ಆಯೋಗ ನೋಟಿಸ್‌

Published 2 ಮೇ 2024, 5:24 IST
Last Updated 2 ಮೇ 2024, 5:24 IST
ಅಕ್ಷರ ಗಾತ್ರ

ಚಿಕ್ಕೋಡಿ:‍ ‍‍ಪ್ರಧಾನಿ ಸಾವು ಹಾಗೂ ಕಾಂಗ್ರೆಸ್‌ಗೆ ಮತ ನೀಡದಿದ್ದರೆ ವಿದ್ಯುತ್‌ ಕಡಿತ ಮಾಡುವ ಹೇಳಿಕೆ ನೀಡಿದ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ರಾಹುಲ್‌ ಶಿಂಧೆ ಅವರು ‘ನೀತಿ ಸಂಹಿತೆ ಉಲ್ಲಂಘನೆ’ ಅಡಿ ಬುಧವಾರ ನೋಟಿಸ್‌ ನೀಡಿದ್ದಾರೆ.

‘ತಮ್ಮ ಎರಡೂ ಹೇಳಿಕೆಗಳ ಕುರಿತು 24 ಗಂಟೆಯೊಳಗೆ ವಿವರಣೆ ಕೊಡಬೇಕು ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಮೂಲಕ ನೋಟಿಸ್‌ ಜಾರಿ ಮಾಡಲಾಗಿದೆ’ ಎಂದು ರಾಹುಲ್‌ ಶಿಂಧೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣೆ ಪ್ರಚಾರದ ವೇಳೆ,  ‘ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ಏಕೆ ಮೋದಿ...ಮೋದಿ... ಎಂದು ಕೂಗುತ್ತೀರಿ’ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಹರಿಹಾಯ್ದಿದ್ದರು.

ಕಾಗವಾಡ ತಾಲ್ಲೂಕಿನ ಮಂಗಾವತಿ ಮತ್ತು ಜುಗುಳ ಗ್ರಾಮಗಳಲ್ಲಿ ಪ್ರಚಾರ ಮಾಡಿ ಮಾತನಾಡಿದ ಭರಮಗೌಡ (ರಾಜು) ಕಾಗೆ, ‘ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ನಿರೀಕ್ಷಿತ ಮತ ಬರದೇ ಇದ್ದರೆ ನಿಮ್ಮೂರಿನ ವಿದ್ಯುತ್‌ ಕಡಿತಗೊಳಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದರು.

ಈ ಸಂಬಂಧ ಚುನಾವಣೆ ಆಯೋಗ ನೋಟಿಸ್‌ ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT