ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Published 30 ಏಪ್ರಿಲ್ 2024, 19:30 IST
Last Updated 30 ಏಪ್ರಿಲ್ 2024, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಬುಧವಾರದಿಂದ ಐದು ದಿನಗಳು ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ. ಇದೇ 6ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮೇ 4ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ. ಬುಧವಾರದಿಂದ ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮಂಗಳವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಕಲಬುರಗಿಯಲ್ಲಿ ಗರಿಷ್ಠ (42.8 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ. ಬೆಂಗಳೂರಿನಲ್ಲಿ ಸಂಜೆ 5.30ಕ್ಕೆ ಅನ್ವಯಿಸಿದಂತೆ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT