ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಯುವಕ –ಯುವತಿ ಅಡ್ಡಗಟ್ಟಿ ಹಲ್ಲೆ, ಆರೋಪಿ ಬಂಧನ

Published 18 ಫೆಬ್ರುವರಿ 2024, 15:48 IST
Last Updated 18 ಫೆಬ್ರುವರಿ 2024, 15:48 IST
ಅಕ್ಷರ ಗಾತ್ರ

ಬೆಂಗಳೂರು: ಯುವಕ ಹಾಗೂ ಯುವತಿ ಹೊರಟಿದ್ದ ಬೈಕ್ ಅಡ್ಡಗಟ್ಟಿ ಹಲ್ಲೆ ಮಾಡಿದ್ದ ಆರೋಪದಡಿ ಎನ್‌. ರಾಕೇಶ್ (23) ಅವರನ್ನು ಎಚ್‌ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕುಂದನಹಳ್ಳಿ ನಿವಾಸಿ ರಾಕೇಶ್, ಫೆ.1ರಂದು ಸಂಜೆ ಕೃತ್ಯ ಎಸಗಿ ಪರಾರಿಯಾಗಿದ್ದ. ಈತನ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಸಾರ್ವಜನಿಕರೊಬ್ಬರು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೊ ಆಧರಿಸಿ ಪ್ರಕರಣ ದಾಖಲಿಸಿಕೊಂಡು ರಾಕೇಶ್‌ನನ್ನು ಸೆರೆ ಹಿಡಿಯಲಾಗಿದೆ’ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಶಿವಕುಮಾರ್ ಗುಣಾರೆ ತಿಳಿಸಿದರು.

‘ಪರಿಚಯಸ್ಥರಾಗಿದ್ದ ಯುವಕ ಹಾಗೂ ಯುವತಿ ಒಟ್ಟಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಕುಂದನಹಳ್ಳಿ ಸಿಗ್ನಲ್‌ ಬಳಿ ಬೈಕ್‌ ಅಡ್ಡಗಟ್ಟಿ ಬೀಳಿಸಿದ್ದ ಆರೋಪಿ ರಾಕೇಶ್, ಯುವಕನನ್ನು ತಳ್ಳಾಡಿದ್ದ. ಅಂಗಿ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದ. ಕಾಲಿನಿಂದ ಒದ್ದಿದ್ದ. ರಕ್ಷಣೆಗೆ ಬಂದವರನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ’ ಎಂದು ಹೇಳಿದರು.

‘ವಿಡಿಯೊ ಗಮನಕ್ಕೆ ಬರುತ್ತಿದ್ದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನಾ ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿ ರಾಕೇಶ್‌ನನ್ನು ಬಂಧಿಸಲಾಗಿದೆ. ಯುವಕ–ಯುವತಿಯಿಂದ ಹೇಳಿಕೆ ಪಡೆಯಬೇಕಿದೆ’ ಎಂದರು.

ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಜಗಳ ನಡೆದಿರುವ ಮಾಹಿತಿ ಇದ್ದು, ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT