‘ವರ್ಗಾವಣೆ ವಿಚಾರವಾಗಿ ಮಾತನಾಡಲು ಹೋಗಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ನಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ. ವರ್ಗಾವಣೆ ಆಮಿಷವೊಡ್ಡುತ್ತಲೇ ಪದೇ ಪದೇ ದೌರ್ಜನ್ಯ ನಡೆಸಿದ್ದಾರೆ’ ಎಂದು ಆರೋಪಿಸಿರುವ ಇಬ್ಬರು ಮಹಿಳಾ ಅಧಿಕಾರಿಗಳು, ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ವಿವರಣೆ ನೀಡಿದ್ದಾರೆಂದು ಹೇಳಲಾಗುತ್ತಿದೆ.