ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈ–ಕ: 3 ತಿಂಗಳಲ್ಲಿ ಮೀಸಲು ನಿಗದಿಗೆ ಸೂಚನೆ

Last Updated 21 ಜೂನ್ 2018, 19:43 IST
ಅಕ್ಷರ ಗಾತ್ರ

ಬೆಂಗಳೂರು: ಎಲ್ಲ ಇಲಾಖೆಗಳು, ನಿಗಮ–ಮಂಡಳಿಗಳಲ್ಲಿ 371 ಜೆ ಮೀಸಲಾತಿ ಅಡಿ ಲಭ್ಯವಿರುವ ಹುದ್ದೆಗಳನ್ನು ಗುರುತಿಸಿ, ಮೀಸಲಾತಿ ನಿಗದಿಪಡಿಸುವ ಕೆಲಸವನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಆದೇಶಿಸಿದ್ದಾರೆ.

ಕಾಲಬದ್ಧವಾಗಿ ಇವೆಲ್ಲವನ್ನೂ ಮಾಡದೇ ಇದ್ದರೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೊರಡಿಸಿರುವ ಸುತ್ತೋಲೆಯಲ್ಲಿ ಎಚ್ಚರಿಸಿದ್ದಾರೆ.

ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿನ ಎಲ್ಲ ಪದನಾಮದ ಹುದ್ದೆಗಳಿಗೆದುರಾಗಿ ಅನ್ವಯಿಸುವ ಮೀಸಲಾತಿ ನಿಗದಿ ಮಾಡಬೇಕು ಮತ್ತು ರಾಜ್ಯ ವ್ಯಾಪಿ ಸ್ಥಳೀಯ ವೃಂದ ರಚಿಸಿ ಅಧಿಸೂಚನೆ ಹೊರಡಿಸಬೇಕು ಎಂದು ಹೇಳಿದ್ದಾರೆ.

ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ ಆರು ಜಿಲ್ಲೆಗಳು ಹಾಗೂ ಬೆಂಗಳೂರು ಮಾತ್ರವಲ್ಲದೇ ವಿವಿಧ ಕಡೆಗಳಲ್ಲಿರುವ ನಿಗಮ–ಮಂಡಳಿ ಕಚೇರಿಗಳು, ವಿಧಾನಮಂಡಲ ಸಚಿವಾಲಯ, ವಿಶ್ವವಿದ್ಯಾನಿಲಯಗಳು, ಸರ್ಕಾರದ ವ್ಯಾಪ್ತಿಯಲ್ಲಿರುವ ಸ್ವಾಯತ್ತ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಕೂಡ ಇದನ್ನು ಪಾಲಿಸಬೇಕು ಎಂದು ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT