ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಷ ಕಳಚುವಾಗಲೇ ಯಕ್ಷ ಕಲಾವಿದ ಗಂಗಾಧರ ಪುತ್ತೂರು ಹೃದಯಾಘಾತದಿಂದ ನಿಧನ

Published 2 ಮೇ 2024, 2:25 IST
Last Updated 2 ಮೇ 2024, 9:15 IST
ಅಕ್ಷರ ಗಾತ್ರ

ಮಂಗಳೂರು: ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು (59 ವರ್ಷ) ನಿಧನರಾದರು.

ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿರುವಾಗ ಅವರಿಗೆ ತೀವ್ರ ಹೃದಯಾಘಾತವಾಗಿ, ಮೃತಪಟ್ಟಿದ್ದಾರೆ.

ನಾರಾಯಣಯ್ಯ ಮತ್ತು ಲಕ್ಷ್ಮಿ ದಂಪತಿಯ ಪುತ್ರನಾಗಿ 1964ರಲ್ಲಿ ಪುತ್ತೂರು ತಾಲ್ಲೂಕಿನ ಸೇಡಿಯಾಪು ಮನೆಯಲ್ಲಿ ಜನಿಸಿದ ಅವರು, ಏಳನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದು, ನಂತರ ಕೆ.‌ಗೋವಿಂದ ಭಟ್, ಕರ್ಗಲ್ಲು ವಿಶ್ವೇಶ್ವರ ಭಟ್ ಅವರಲ್ಲಿ ನಾಟ್ಯಾಭ್ಯಾಸ ಕಲಿತರು.‌
18ನೇ ವಯಸ್ಸಿನಿಂದ ಮೇಳ ತಿರುಗಾಟ ಆರಂಭಿಸಿದ ಅವರು, ಸ್ತ್ರೀ ವೇಷ, ಪುಂಡು ವೇಷ, ರಾಜ ವೇಷ ನಿರ್ವಹಿಸುವಲ್ಲಿ ಎತ್ತಿದ ಕೈಯಾಗಿದ್ದರು.

ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿಣಿ, ಪ್ರಮೀಳೆ, ಶ್ರೀದೇವಿ, ಸೀತೆ, ದೇವೇಂದ್ರ, ದುಶ್ಯಾಸನ ಮೊದಲಾದ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಹಾಸ್ಯದ ಸ್ತ್ರೀ ಪಾತ್ರಗಳನ್ನು ನಿರ್ವಹಿಸುವ ಪ್ರೌಢಿಮೆ‌ ಕೂಡ ಅವರಲ್ಲಿತ್ತು.

ಗಂಗಾಧರ ಪುತ್ತೂರು

ಗಂಗಾಧರ ಪುತ್ತೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT