ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಮತದಾನ ವಿಡಿಯೊ: ಎರಡು ಪ್ರತ್ಯೇಕ ಪ್ರಕರಣ ದಾಖಲು

Published 7 ಮೇ 2024, 14:32 IST
Last Updated 7 ಮೇ 2024, 14:32 IST
ಅಕ್ಷರ ಗಾತ್ರ

ಹುಬ್ಬಳ್ಳಿ/ಬಳ್ಳಾರಿ: ಧಾರವಾಡ ಲೋಕಸಭಾ ಕ್ಷೇತ್ರದ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಮುದಾಯ ಭವನದ ಮತಗಟ್ಟೆ ಸಂಖ್ಯೆ–112ರಲ್ಲಿ ಮತದಾನ ಮಾಡಿದ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ತನ್ವೀರ್‌ ಅಹಮದ್ ಮನಿಯಾರ್ (33) ಎಂಬುವರ ವಿರುದ್ಧ ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿಯ ನಗರದ ವಾಸವಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮತಗಟ್ಟೆ ಸಂಖ್ಯೆ–63ರಲ್ಲಿ ಮತದಾನ ಮಾಡಿದ ಚಿತ್ರವನ್ನು ವಾಟ್ಸ್‌ಆ್ಯಪ್‌ ಸ್ಟೇಟಸ್ ಹಾಕಿಕೊಂಡ ಆರೋಪದ ಮೇಲೆ ಬಳ್ಳಾರಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಕೆ.ತಿಲಕ್‌ಕುಮಾರ್ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡೂ ಪ್ರಕರಣಗಳಲ್ಲಿ ಮತಗಟ್ಟೆ ಒಳಗೆ ಮೊಬೈಲ್‌ ಫೋನ್‌ ಒಯ್ಯಲು ಅನುವು ಮಾಡಿಕೊಟ್ಟ ಚುನಾವಣಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT