ಮಂಡ್ಯ: ನಗರದ ಮಂಡ್ಯ ವಿವಿ ಆವರಣದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ-2 ಸಮಾವೇಶ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ಪಕ್ಷದ ವರಿಷ್ಠ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಸಮಾವೇಶ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಜನರು ಬರುತ್ತಿದ್ದಾರೆ.