ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವದುರ್ಗ: ಮತಗಟ್ಟೆ ಅಧಿಕಾರಿಯಾಗಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ (58) ಮಂಗಳವಾರ ಮಧ್ಯಾಹ್ನ ಹೃದಯಘಾತದಿಂದ ಮೃತಪಟ್ಟಿದ್ದಾರೆ.
Published 7 ಮೇ 2024, 12:41 IST
Last Updated 7 ಮೇ 2024, 12:41 IST
ಅಕ್ಷರ ಗಾತ್ರ

ದೇವದುರ್ಗ (ರಾಯಚೂರು ಜಿಲ್ಲೆ): ತಾಲ್ಲೂಕಿನ ಜಾಗೀರಜಾಡಲದಿನ್ನಿ‌ ಗ್ರಾಮದ ಮತಗಟ್ಟೆಯಲ್ಲಿ ಬಿ ಎಲ್ ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ (58) ಮಂಗಳವಾರ ಮಧ್ಯಾಹ್ನ ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಮೃತ ಬಸವರಾಜ ಸಿರವಾರ ತಾಲ್ಲೂಕಿನ ಅತ್ತನೂರು ಗ್ರಾಮದವರೆಂದು ತಿಳಿದು ಬಂದಿದೆ.

ಏಕಾ ಏಕಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮತಗಟ್ಟೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು ಚೇತರಿಸಿಕೊಂಡಿದ್ದ ಅವರನ್ನು ಸಿರವಾರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿಗೆ ಕರೆದುಯ್ಯುವ ರಸ್ತೆ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಸಹಾಯಕ ಚುನಾವಣೆ ಅಧಿಕಾರಿ ಚೇತನ ಕುಮಾರ ತಿಳಿಸಿದರು. ಮೃತ ಬಸವರಾಜ ಅವರಿಗೆ 3 ಜನ ಪುತ್ರಿಯರು, ಪತ್ನಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT