ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿವೈಆರ್ ನಾಮಪತ್ರ ಸಲ್ಲಿಕೆ ವೇಳೆ ಎಚ್‌ಡಿಕೆ ಹಾಜರಿ: ಕೆ.ಬಿ.ಪ್ರಸನ್ನಕುಮಾರ್

Published 16 ಏಪ್ರಿಲ್ 2024, 15:52 IST
Last Updated 16 ಏಪ್ರಿಲ್ 2024, 15:52 IST
ಅಕ್ಷರ ಗಾತ್ರ

ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಏ.18ರಂದು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಪಕ್ಷದ ಜಿಲ್ಲೆಯ ಮುಖಂಡರು, ಬೂತ್‍ಮಟ್ಟದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು. 

ಎಚ್.ಡಿ.ಕುಮಾರಸ್ವಾಮಿ ಕೇವಲ ನಾಮಪತ್ರ ಸಲ್ಲಿಕೆ ವೇಳೆ ಮಾತ್ರ ಬಂದುಹೋಗದೇ, ಚುನಾವಣೆ ಪ್ರಚಾರದಕ್ಕೂ ಜಿಲ್ಲೆಗೆ ಬರಲಿದ್ದಾರೆ. ಹೆಚ್ಚಿನ ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಲಿದ್ದಾರೆ ಎಂದರು.

ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ನಾಮಪತ್ರ ಹಿಂತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಅಭಿಪ್ರಾಯಪಟ್ಟರು. 

‘ಗ್ಯಾರಂಟಿಗಳನ್ನು ಟೀಕಿಸುವ ಭರದಲ್ಲಿ ಗ್ರಾಮೀಣ ಮಹಿಳೆಯರಿಗೆ ಕುಮಾರಸ್ವಾಮಿ ಅಪಮಾನ ಮಾಡಿದ್ದಾರಲ್ಲಾ?’ ಎಂಬ ಪ್ರಶ್ನೆಗೆ, ‘ಹಾಗೇನೂ ಇಲ್ಲ, ಅವರು ಹೇಳಿದ ಅರ್ಥವೇ ಬೇರೆ, ಈಗಾಗಲೇ ಅದಕ್ಕೆ ಕ್ಷಮೆ ಕೂಡ ಕೇಳಿದ್ದಾರೆ. ಅದು ಮುಗಿದ ಅಧ್ಯಾಯ’ ಎಂದು ಪ್ರತಿಕ್ರಿಯಿಸಿದರು. 

ಪ್ರಮುಖರಾದ ರಾಮಕೃಷ್ಣ, ದೀಪಕ್‍ ಸಿಂಗ್, ಗೀತಾ ಸತೀಶ್, ಎಸ್.ವಿ.ರಾಜಮ್ಮ, ತ್ಯಾಗರಾಜ್, ನರಸಿಂಹಮೂರ್ತಿ ಗಂಧದಮನೆ, ಸಿದ್ದಪ್ಪ, ರಘು, ಸಂಗಯ್ಯ, ಅಬ್ದುಲ್ ವಾಜೀದ್, ವಿನಯ್, ರಾಚಯ್ಯ, ಪುಷ್ಪ, ಆಯನೂರು ಶಿವಾನಾಯಕ, ಸಂಜಯ್ ಕಶ್ಯಪ್, ಪ್ರಭು ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT