ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಪುರ ಉಪಚುನಾವಣೆ: ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ

ಸುರಪುರ ತಾಲ್ಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ.
Published 7 ಮೇ 2024, 11:39 IST
Last Updated 7 ಮೇ 2024, 11:39 IST
ಅಕ್ಷರ ಗಾತ್ರ

ಯಾದಗಿರಿ: ಮತದಾನದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟವಾಗುವ ಹಂತಕ್ಕೆ ತಲುಪಿ ಒಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಸುರಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜಿಲ್ಲೆಯ ಸುರಪುರ ತಾಲ್ಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ.

ಸುರಪುರ ಉಪ ಚುನಾವಣೆಗೆ ಮತದಾನ ಹಿನ್ನೆಲೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆದು ಈ ವೇಳೆ ಒಬ್ಬರ ತಲೆಗೆ ಗಂಭೀರ ಗಾಯವಾಗಿದೆ. ಕಲ್ಲು ತೂರಾಟ ಹಿನ್ನೆಲೆ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ‌ ದೌಡಾಯಿಸಿದ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿ ನಿಯಂತ್ರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT