ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ ಮಾಡುವುದಾಗಿ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ತಿಳಿಸಿದ್ದಾರೆ.
ಹಾಸ್ಯದ ಮೂಲಕ ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಹೆಚ್ಚು ಪ್ರಸಿದ್ಧಿಯಾಗಿರುವ ಶ್ಯಾಮ್ ರಂಗೀಲಾ ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶೀಘ್ರದಲ್ಲೇ ವಾರಣಾಸಿಗೆ ಬರಲಿದ್ದು, ಯಾವಾಗ ನಾಮಪತ್ರ ಸಲ್ಲಿಸಲಾಗುವುದು ಎಂಬ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಕೆಲವರು ಇದನ್ನು ತಮಾಷೆ ಎಂದುಕೊಂಡಿದ್ದಾರೆ ಆದರೆ ನಾನು ವಾರಾಣಸಿಯಲ್ಲಿ ಮೋದಿ ಎದುರು ಸ್ಪರ್ಧಿಸುತ್ತಿದ್ದೇನೆ. ಇದಕ್ಕೆ ನಿಮ್ಮ ಆಶೀರ್ವಾದ ಬೇಕು ಎಂದಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು. ನಾನು ಚುನಾವಣೆಗೆ ಸ್ಪರ್ಧಿಸಲು ಕಾರಣವಿದೆ ಎಂದು ಶ್ಯಾಮ್ ರಂಗೀಲಾ ಹೇಳಿದ್ದಾರೆ.