ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BYR ತಂದೆಗೆ ತಕ್ಕ ಮಗ; ಪಾಸ್‌ ಅಂಕಕ್ಕೂ ಪರೀಕ್ಷೆ ಬರೆಯದ ಕಾಂಗ್ರೆಸ್: ಬೊಮ್ಮಾಯಿ

Published 18 ಏಪ್ರಿಲ್ 2024, 9:36 IST
Last Updated 18 ಏಪ್ರಿಲ್ 2024, 9:36 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಸಂಸತ್‌ನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರಗಳಲ್ಲಿ. ಹೀಗಾಗಿ ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಪರೀಕ್ಷೆಯಲ್ಲಿ ಪಾಸ್ ಆಗಲು ಕನಿಷ್ಠ 35 ಅಂಕಗಳು ಬೇಕು. ಆದರೆ, ಅವರು ಪರೀಕ್ಷೆ ಬರೆದಿರುವುದೇ 20 ಅಂಕಗಳಿಗೆ. ಕಾಂಗ್ರೆಸ್ ಪಾಸ್ ಆಗಲು ಹೇಗೆ ಸಾಧ್ಯ ? ಕಾಂಗ್ರೆಸ್ ಪಕ್ಷ ಫೇಲ್ ಆಗುವ ಪಕ್ಷ’ ಎಂದು ವಾಗ್ದಾಳಿ ನಡೆಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ‘ತಂದೆಗೆ ತಕ್ಕ ಮಗ. ಜಗ ಮೆಚ್ಚಿದ ಮಗ’ ಎಂದು ಬಣ್ಣಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೊವಿಡ್ ಸಂದರ್ಭದಲ್ಲಿ ದೇಶದ 130 ಕೋಟಿ ಜನರಿಗೆ ಮೂರು ಬಾರಿ ಲಸಿಕೆ ‌ಕೊಡಿಸಿ ಎಲ್ಲರ ಜೀವ ಉಳಿಸಿದ್ದಾರೆ. ಕೊವಿಡ್ ಸಂದರ್ಭದಲ್ಲಿ 10 ಕೆ.ಜಿ. ಅಕ್ಕಿ ಕೊಟ್ಟಿದ್ದಾರೆ. ಈಗಲೂ 5 ಕೆ.ಜಿ. ಅಕ್ಕಿಯನ್ನು ನರೇಂದ್ರ ಮೋದಿ ಉಚಿತವಾಗಿ ನೀಡುತ್ತಿದ್ದಾರೆ. ಪ್ರತಿಯೊಬ್ಬರ ಮನೆಗಳಿಗೂ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಗಂಗೆ ರೂಪದಲ್ಲಿ ನಳದ ನೀರು ಕೊಡುತ್ತಿದ್ದಾರೆ. ಎಲ್ಲರಿಗೂ ಅನ್ನ, ನೀರು, ಲಸಿಕೆ ಕೊಟ್ಟು ಜೀವ ಉಳಿಸಿದ ಅವರ ಋಣ ತೀರಿಸಬೇಕು. ಎಲ್ಲರೂ ಕಮಲದ ಗುರುತಿಗೆ ಮತ ಹಾಕಿ, ಅವರ ಋಣ ತೀರಿಸುವ ಕೆಲಸ ಮಾಡಬೇಕು’ ಎಂದು ಹೇಳಿದರು.

‘ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಲ್ಕೂವರೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ರಾಘವೇಂದ್ರ ಅವರನ್ನು ನಾಲ್ಕೂವರೆ ಲಕ್ಷಕ್ಕಿಂತಲೂ ಅಧಿಕ ಮತಗಳಿಂದ‌ ಆರಿಸಿ ಕಳುಹಿಸಬೇಕು’ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಸಿ.ಟಿ.ರವಿ, ಬೈರತಿ ಬಸವರಾಜ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಶಾಸಕರಾದ ಶಾರದಾ ಪೂರ್ಯಾನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT