ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌: ಶಿವಮೊಗ್ಗ, ರಾಯಚೂರಿನಲ್ಲಿ ಚುನಾವಣೆ ಪ್ರಚಾರ

Published 2 ಮೇ 2024, 4:56 IST
Last Updated 2 ಮೇ 2024, 4:56 IST
ಅಕ್ಷರ ಗಾತ್ರ

ಶಿವಮೊಗ್ಗ/ರಾಯಚೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2ರಂದು) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ರಾಹುಲ್ ಗಾಂಧಿ ಮೇ 2ರಂದು ಮಧ್ಯಾಹ್ನ 12ಕ್ಕೆ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ನಡೆದಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

‘ರಾಹುಲ್‌ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾರ್ಯದರ್ಶಿ ಮಯೂರ್‌ ಜಯಕುಮಾರ್ ಭಾಗವಹಿಸಲಿದ್ದಾರೆ ಎಂದರು.

ರಾಯಚೂರು: ಇಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ರಾಯಚೂರು ಲೋಕಸಭಾ ಎಸ್‌.ಟಿ.ಮೀಸಲು ಕ್ಷೇತ್ರದ ಅಭ್ಯರ್ಥಿ ಜಿ.ಕುಮಾರನಾಯಕ ಪರ ಪ್ರಚಾರ ಸಭೆ ಕಾಂಗ್ರೆಸ್‌ ಯುವ ಮುಖಂಡ ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ ಪ್ರಮುಖರು ಆಗಮಿಸುತ್ತಿದ್ದು, ಸಭೆಯಲ್ಲಿ 30 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ‘ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಆಗಮಿಸುತ್ತಿದ್ದಾರೆ. 

‘ರಾಹುಲ್‌ ಗಾಂಧಿ ಅವರು ವಿಶೇಷ ವಿಮಾನದ ಮೂಲಕ ಬಳ್ಳಾರಿ ಜಿಲ್ಲೆಯ ಜಿಂದಾಲ್‌ಗೆ ಬಂದು ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ರಾಯಚೂರಿಗೆ ಬರುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT