ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ, ಚಿಕ್ಕಬಳ್ಳಾಪುರಕ್ಕೆ ‘ಕೃಷ್ಣಾ’ ನೀರು: ದೇವೇಗೌಡ

ಕಾಂಗ್ರೆಸ್ ವಿರುದ್ಧ ಗುಡುಗಿದ ಎಚ್‌.ಡಿ.ದೇವೇಗೌಡ
Published 20 ಏಪ್ರಿಲ್ 2024, 15:05 IST
Last Updated 20 ಏಪ್ರಿಲ್ 2024, 15:05 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಆಗ ನಾವು ಪ್ರಧಾನಿ ಅವರ ಬಳಿ ಹೋಗಿ ಕೃಷ್ಣಾ ನದಿ ನೀರು ಕೊಡಿ, ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ ಎಂದು ಕೇಳಬಹುದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.

ನಗರದ ಹೊರವಲಯದ ಚೊಕ್ಕಹಳ್ಳಿ ಬಳಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು. 

ತಮ್ಮ ಆಡಳಿತದ 10 ವರ್ಷದಲ್ಲಿ ದೇಶವನ್ನು ಉತ್ತಮ  ಸ್ಥಾನಕ್ಕೆ ಕೊಂಡೊಯ್ದಿರುವ ಪ್ರಧಾನಿ ನರೇಂದ್ರ ಮೋದಿ. ಅಂತಹವರ ಬಗ್ಗೆ ಈ ರಾಜ್ಯದ ಮುಖ್ಯಮಂತ್ರಿ ಚೊಂಬು ಕೊಟ್ಟರು ಎಂದು ಮಾತನಾಡುವರು. ಕಾಂಗ್ರೆಸ್‌ನವರು ಈ ದೇಶದ ಸಂಪತ್ತನ್ನು ಲೂಟಿ ಮಾಡಿದರು ಎಂದರು.

ಪರಿಶಿಷ್ಟ ಜಾತಿ, ಪಂಗಡದ ಜನರನ್ನು ಮೇಲೆತ್ತಿದ್ದು ನರೇಂದ್ರ ಮೋದಿ. ಆದರೆ ಈಗ ಅವರ ಹೆಸರು ಹೇಳಿ ಕ್ಷುಲ್ಲಕ ರಾಜಕಾರಣವನ್ನು ಮಾಡುತ್ತಿದ್ದಾರೆ. ದೇಶಕ್ಕೆ ಸುಮಾರು 34 ಕಾರ್ಯಕ್ರಮಗಳನ್ನು ನೀಡಿದ್ದಾರೆ. ನಿರುದ್ಯೋಗ ಪರಿಹಾರಕ್ಕೆ ಕ್ರಮವಹಿಸಿದ್ದಾರೆ ಎಂದರು.

ಈಗ ರಾಜ್ಯದಲ್ಲಿ ಐದು ಗ್ಯಾರಂಟಿ ಮತ್ತು ದೇಶದಲ್ಲಿ 25 ಗ್ಯಾರಂಟಿ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆದರೆ 10 ವರ್ಷಗಳಿಂದ ವಿರೋಧ ಪಕ್ಷದ ನಾಯಕನ ಸ್ಥಾನ ಪಡೆಯುವ ಯೋಗ್ಯತೆಯೂ ಕಾಂಗ್ರೆಸ್‌ಗೆ ಇಲ್ಲವಾಗಿದೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT